ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೋಕಪಾಲ್‌ಗಾಗಿ ಮತ್ತೆ 'ಅಣ್ಣಾ' ಹೋರಾಟ

ಜನ ಲೋಕಪಾಲ್ ಜಾರಿಗೆ ಆಗ್ರಹಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮತ್ತೆ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ.

Srinivasa Murthy VN
Updated On : 13 Sept 2013, 5:02 am

ಅಹ್ಮದನಗರ: ಜನ ಲೋಕಪಾಲ್ ಜಾರಿಗೆ ಆಗ್ರಹಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮತ್ತೆ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ.

ಮುಂಬರುವ ಚಳಿಗಾಲದ ಅಧಿವೇಶನದ ವೇಳೆಯಲ್ಲಿ ಅಣ್ಣಾ ಹಜಾರೆ ಮತ್ತು ಅವರ ತಂಡ ದೆಹಲಿಯಲ್ಲಿ ಸತ್ಯಾಗ್ರಹ ಆರಂಭಿಸುವ ಕುರಿತು ಚಿಂತನೆಯಲ್ಲಿ ತೊಡಗಿದೆ. ಈ ಹಿಂದೆ ಕೇಂದ್ರ ಸರ್ಕಾರ ನೀಡಿದ್ದ ಆಶ್ವಾಸನೆಯಂತೆ ಲೋಕಸಭೆಯಲ್ಲಿ ಜನಲೋಕಪಾಲ್ ಮಸೂದೆಯನ್ನು ಮಂಡಿಸಬೇಕಿತ್ತು. ಆದರೆ ಮಸೂದೆಯಲ್ಲಿ ತಿದ್ದುಪಡಿಗೆ ಆಗ್ರಹಿಸಿದ್ದ ಪ್ರತಿಪಕ್ಷಗಳು ಮಸೂದೆ ಮಂಡನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

ಆದರೆ ಅಂದು ತಿದ್ದುಪಡಿಗೆ ಮುಂದಾಗಿದ್ದ ಕೇಂದ್ರ ಸರ್ಕಾರ ತದ ನಂತರ ಮಸೂದೆ ಮಂಡನೆ ಕುರಿತು ನಿರ್ಲಕ್ಷ್ಯ ತೋರಿತ್ತು. ಮಸೂದೆ ಕುರಿತು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮತ್ತೆ ಅಣ್ಣಾ ಹಜಾರೆ ಅವರು ಕಣಕ್ಕಿಳಿಯಲು ಮುಂದಾಗಿದ್ದಾರೆ. ಚಳಿಗಾಲದ ಅಧಿವೇಶನದ ವೇಳೆ ಮತ್ತೆ ಸತ್ಯಾಗ್ರಹ ಆರಂಭಿಸಲು ಅಣ್ಣಾ ಹಜಾರೆ ನಿರ್ಧರಿಸಿದ್ದು, ಟೀಂ ಅಣ್ಣಾ ತಂಡದ ಸದ್ಯಸರು ಸತ್ಯಾಗ್ರಹದ ಪೂರ್ವ ತಯಾರಿಯಲ್ಲಿ ತೊಡಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಣ್ಣಾ ಹಜಾರೆ ಅವರು, 'ಕೇಂದ್ರ ಸರ್ಕಾರ ತನ್ನ ಮಾತಿನಂತೆ ನಡೆದುಕೊಂಡಿಲ್ಲ. ಕಳೆದ ಮುಂಗಾರು ಅಧಿವೇಶನದಲ್ಲಿಯೇ ಲೋಕ್‌ಪಾಲ್ ಮಸೂದೆ ಮಂಡಿಸುವುದಾಗಿ ಭರವಸೆ ನೀಡಿದ್ದ ಪ್ರಧಾನಿ ಮನಮೋಹನ್ ಸಿಂಗ್ ಅವರು ಮಾತು ತಪ್ಪಿದ್ದಾರೆ. ಮುಂಬರುವ ಚಳಿಗಾಲದ ಅಧಿವೇಶನದ ವೇಳೆ ನಾನು ದೆಹಲಿಯ ರಾಮಲೀಲಾ ಮೈದಾನದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳುತ್ತಿದ್ದೇನೆ. ದೇಶದ ಜನತೆ ಮತ್ತು ಯುವ ಸಮೂಹ ಒಂದು ಅಹಿಂಸಾತ್ಮಕ ಸತ್ಯಾಗ್ರಹವನ್ನು ಸಂಘಟಿಸಬೇಕು' ಎಂದು ಅಣ್ಣಾ ಹಜಾರೆ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement