ಹತ್ಯಾಚಾರಿಗಳಿಗೆ ಗಲ್ಲು: ಕಣ್ಣೀರಿಟ್ಟ ಅಪರಾಧಿಗಳ ಪರ ವಕೀಲ
ದೆಹಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಅಟ್ಟಹಾಸಗೈದಿದ್ದ ..
ನವದೆಹಲಿ: ದೆಹಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಅಟ್ಟಹಾಸಗೈದಿದ್ದ ನಾಲ್ವರು ಪಾತಕಿಗಳಿಗೆ ದೆಹಲಿ ಸಾಕೇತ್ ಕೋರ್ಟ್ ಗಲ್ಲು ಶಿಕ್ಷೆ ಪ್ರಕಟಿಸುತ್ತಿದ್ದಂತೆ ಅಪರಾಧಿಗಳ ಪರ ವಕೀಲ ಎ.ಪಿ.ಸಿಂಗ್ ಕಣ್ಣೀರಿಟ್ಟ ಘಟನೆ ಕೋರ್ಟ್ ಹೊರಗಡೆ ನಡೆಯಿತು.
ಸಾಕೇತ್ ಕೋರ್ಟ್ ತೀರ್ಪು ಪ್ರಕಟಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಂಗ್, ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ಬಹಳ ನೋವಿನ ಸಂಗತಿ ಎಂದಿದ್ದಾರೆ. ಅಲ್ಲದೆ ತೀರ್ಪಿನ ಹಿಂದೆ ಎನ್ಜಿಒ ಸಂಸ್ಥೆಗಳ ಒತ್ತಡ ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ.
ಇನ್ನು ಪ್ರಕರಣದ ತನಿಖೆಯ ಬಗ್ಗೆಯೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಂಗ್, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ತನಿಖೆ ನಡೆದಿದೆ ಎಂದು ದೂರಿದರು.
ಇದೇ ವೇಳೆ ಸಾಕೇತ್ ಕೋರ್ಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಎ.ಪಿ.ಸಿಂಗ್ ತಿಳಿಸಿದ್ದಾರೆ. ಅಲ್ಲದೆ ಮುಂದಿನ ಎರಡು ತಿಂಗಳಲ್ಲಿ ಈ ದೇಶದಲ್ಲಿ ಯಾವುದೇ ಅತ್ಯಾಚಾರ ನಡೆಯದಿದ್ದರೆ ತಾವು ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.