ರೇಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ: ಖರ್ಗೆ
ಗುಲ್ಬರ್ಗಾ: ರೇಲ್ವೆ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.
ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರೇಲ್ವೆ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರಸ್ತುತ ರೇಲ್ವೆ ಇಲಾಖೆಯಲ್ಲಿ ಸಿ ಮತ್ತು ಡಿ ವರ್ಗದ ಸುಮಾರು 60 ಸಾವಿರ ಹುದ್ದೆಗಳು ಖಾಲಿ ಇವೆ. ಹೀಗಾಗಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಸಿ ಮತ್ತು ಡಿ ಹುದ್ದೆಗಳ ಪರೀಕ್ಷೆಗಳುನ್ನು ನಡೆಸಲಾಗುವುದು ಎಂದರು.
ಇದೇ ವೇಳೆ, ರೇಲ್ವೆ ಇಲಾಖೆಯ ಸಿ ಮತ್ತು ಡಿ ವರ್ಗದ ಸುಮಾರು 60 ಸಾವಿರ ಹುದ್ದೆಗಳು ಖಾಲಿ ಉಳಿದಿದ್ದು, ಈ ಸಂಬಂಧ ರೇಲ್ವೆ ಇಲಾಖೆಯ ವತಿಯಿಂದ ಪರೀಕ್ಷೆಗಳನ್ನು ನಡೆಸಲಾಗುವುದು. ಈ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಯಲ್ಲೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಖರ್ಗೆ ಹೇಳಿದರು.