ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿಯನ್ನು ಹಾಡಿ ಹೊಗಳಿದ ಆಡ್ವಾಣಿ

ಪ್ರಧಾನಿ ಅಭ್ಯರ್ಥಿಯಾಗಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಆಯ್ಕೆ ವಿರುದ್ಧ ಮುನಿಸಿಕೊಂಡಿದ್ದ ಬಿಜೆಪಿ ಹಿರಿಯ...

Vishwanath S
Updated On : 16 Sept 2013, 3:25 am

ಕೊರ್ಬಾ: ಪ್ರಧಾನಿ ಅಭ್ಯರ್ಥಿಯಾಗಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಆಯ್ಕೆ ವಿರುದ್ಧ ಮುನಿಸಿಕೊಂಡಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ ಆಡ್ವಾಣಿ, ಕೊನೆಗೂ ತಮ್ಮ ಮೌನ ಮುರಿದಿದ್ದು, ಪ್ರಧಾನಿ ಅಭ್ಯರ್ಥಿಯಾಗಿ ಮೋದಿ ಆಯ್ಕೆಗೆ ಸೋಮವಾರ ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ಛತ್ತೀಸ್‌ಗಡ್‌ನ ಕೊರ್ಬಾದಲ್ಲಿ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ಅಭಿವೃದ್ದಿಗೆ ಸಂಬಂಧಿಸಿದಂತೆ ಮೋದಿ ಕಾರ್ಯವನ್ನು ಹಾಡಿ ಹೊಗಳಿದರು. ಅಲ್ಲದೆ ಮೋದಿ ಅವರನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿರುವುದು ನನಗೆ ಸಂತಸ ತಂದಿದೆ ಎಂದರು.

ಮೋದಿ ಆಯ್ಕೆ ಸಂಬಂಧ ಶುಕ್ರವಾರ ನಡೆದ ಪಕ್ಷದ ಸಂಸದೀಯ ಸಭೆಗೆ ಗೈರಾಗಿ ಮೋದಿ ವಿರುದ್ದ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದು ನಿಜ. ಆದರೆ ಗುಜರಾತ್ ರಾಜ್ಯದ ಅಭಿವೃದ್ಧಿ ನೋಡಿದರೆ ಪಕ್ಷ ತೆಗೆದುಕೊಂಡಿರುವ ತೀರ್ಮಾನ ಸರಿಯಾಗಿದೆ ಎಂದು ಹೇಳಿದ್ದಾರೆ.

ಗುಜರಾತ್ ಅಭಿವೃದ್ದಿಗಾಗಿ ಮೋದಿ ತುಂಬಾನೆ ಶ್ರಮವಹಿಸಿದ್ದು, ಗುಜರಾತ್‌ನ್ನು ಅಭಿವೃದ್ದಿಯ ಪತದಲ್ಲಿ ಮುನ್ನಡೆಯುವಂತೆ ಮಾಡಿದ್ದಾರೆ. ಅಲ್ಲದೆ ರಾಜ್ಯದ ಹಳ್ಳಿ ಹಳ್ಳಿಗೂ  ಮೂಲಸೌಕರ್ಯ ಮತ್ತು ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ದೇಶದಲ್ಲಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದ ಮೊದಲ ವ್ಯಕ್ತಿ ಎಂದರೆ ಅದು ಮೋದಿ ಎಂದು ಶ್ಲಾಘಿಸಿದರು.

ಇದೇ ವೇಳೆ, ಮೋದಿ ಗುಜರಾತ್ ಅನ್ನು ಅಭಿವೃದ್ಧಿಯ ಪತದಲ್ಲಿ ನಡೆಸಿದ್ದಂತೆ ಛತ್ತೀಸ್‌ಗಡ್ ಮುಖ್ಯಮಂತ್ರಿ ರಮಣ್ ಸಿಂಗ್ ಸಹ ಮೋದಿ ಹಾದಿಯಲ್ಲೇ ನಡೆಯುತ್ತಿದ್ದು ಛತ್ತೀಸ್‌ಗಡ್‌ದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದರು.

ಛತ್ತೀಸ್‌ಗಡ್ ಅಭಿವೃದ್ದಿಗಾಗಿ ಹಾಗೂ ಇಲ್ಲಿನ ಜನತೆಯ ಸೇವೆ ಮಾಡಲು ಬಿಜೆಪಿ ಸಿದ್ಧವಾಗಿದೆ. ಅಲ್ಲದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪಾಯಿ ಅವರ ನೇತೃತ್ವದಲ್ಲಿ ಛತ್ತೀಸ್‌ಗಡ್ ಅಭಿವೃದ್ಧಿಗಾಗಿ ಪಕ್ಷ ಹೆಚ್ಚು ಒತ್ತು ನೀಡಲಾಗಿತ್ತು. ಬಿಜೆಪಿ ದೇಶದ ಜನತೆಯ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದೆ ಹೊರತು ಮತ ಬ್ಯಾಂಕ್ ರಾಜಕಾರಣ ಮಾಡಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement