ಸೆ.30ರವರೆಗೆ ಅಸಾರಾಂ ಬಾಪುಗೆ ಜೈಲೇ ಗತಿ
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಸ್ವಯಂಘೋಷಿಸಿತ ದೇವಮಾನವ..
ಜೊಧ್‌ಪುರ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಸ್ವಯಂಘೋಷಿಸಿತ ದೇವಮಾನವ ಅಸಾರಾಂ ಬಾಪು ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಸೋಮವಾರ ವಿಸ್ತರಿಸಲಾಗಿದೆ.
ಅಸಾರಾಂ ಬಾಪು ಅವರ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಅವರನ್ನು ಜೊಧ್‌ಪುರ ಜಿಲ್ಲಾ ಸೆಷನ್ಸ್ ಕೋರ್ಟ್‌ಗೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನದ ಅವಧಿಯನ್ನು ಸೆ.30ರವರೆಗೆ ವಿಸ್ತರಿಸಿದೆ.
ಈ ಮುಂಚೆ ಕೆಳ ನ್ಯಾಯಾಲಯ ಅಸಾರಾಂ ಬಾಪು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕಳೆದ ಸೆಪ್ಟೆಂಬರ್ 1ರಂದು 72 ವರ್ಷದ ಅಸಾರಾಂ ಬಾಪುನನ್ನು ಪೊಲೀಸರು ಬಂಧಿಸಿದ್ದರು.