ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉ.ಪ್ರ ಹಿಂಸಾಚಾರ: ಪ್ರತಿಕ್ರಿಯಿಸುವಂತೆ ಸರ್ಕಾರಕ್ಕೆ ಗಡುವು

ಕಳೆದ ವರ್ಷ ಮಾರ್ಚ್ 15ರಂದು ಸಮಾಜವಾದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಂಭವಿಸಿರುವ ಪ್ರಮುಖ ಹಿಂಸಾಚಾರ...

Vishwanath S
Updated On : 18 Sept 2013, 5:24 am

ಲಖನೌ: ಕಳೆದ ವರ್ಷ ಮಾರ್ಚ್ 15ರಂದು ಸಮಾಜವಾದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಂಭವಿಸಿರುವ ಪ್ರಮುಖ ಹಿಂಸಾಚಾರ ಘಟನೆಗಳನ್ನು ಸಿಬಿಐ ತನಿಖೆ ನಡೆಸಲು ಸರ್ಕಾರಕ್ಕೆ ಆದೇಶಿಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ(ಪಿಐಎಲ್) ಪ್ರತಿಕ್ರಿಯಿಸುವಂತೆ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ನಡೆದ ಪ್ರಮುಖ ಹಿಂಸಾಚಾರ ಘಟನೆಗಳನ್ನು ಸಿಬಿಐ ವಿಚಾರಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸೆ 11ರಂದು ಸಾಮಾಜಿಕ ಕಾರ್ಯಕರ್ತ ನುತನ್ ಠಾಕೂರ್ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳಾದ ಇಮ್ತಿಯಾಜ್ ಮುರ್ತಾಜ ಹಾಗೂ ಅನಿಲ್ ಕುಮಾರ್ ತ್ರಿಪಾಠಿ ಅವರನ್ನೊಳಗೊಂಡ ವಿಭಾಗಿಯ ಪೀಠ, ಸರ್ಕಾರದ ಪರವಾಗಿ ವಿಚಾರಣೆಗೆ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಬುಲ್ಬುಲ್ ಗೊಜಿಯಾಲ್ ಅವರು ಪಿಐಎಲ್‌ಗೆ ಪ್ರತಿಕ್ರಿಯಿಸಲು ಎರಡು ವಾರಗಳ ಕಾಲಾವಕಾಶ ಕೋರಿದ್ದರಿಂದ ಕೋರ್ಟ್ ಎರಡು ವಾರಗಳ ಗಡುವು ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement