ಮೋದಿ ನರಹಂತಕ, ಕೋಮುವಾದಿ: ಸಿಎಂ
ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..
ಬೆಂಗಳೂರು: ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೋದಿ ಒಬ್ಬ ನರಹಂತಕ ಮತ್ತು ಕೋಮುವಾದಿ ಎಂದು ಮಂಗಳವಾರ ಹೇಳಿದ್ದಾರೆ.
ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದರಿಂದ ರಾಜ್ಯದ ಮೇಲೆ ಯಾವುದೇ ಪ್ರಭಾವ ಬೀರಲ್ಲ ಮತ್ತು ಕರ್ನಾಟಕದಲ್ಲಿ ಮೋದಿ ಮೋಡಿ ನಡೆಯಲ್ಲ ಎಂದಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಮೋದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, ಸಚಿವರು ಹಾಗೂ ಶಾಸಕರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನವಾಗಬೇಕೆಂಬ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕಾಂಗ್ರೆಸ್ನಲ್ಲಿ ಇದು ಹೊಸದೇನಲ್ಲ. ಮೌಲ್ಯಮಾಪನ ಮಾಡುವುದಾದರೆ ಮಾಡಿಕೊಳ್ಳಲಿ ಎಂದು ತಿಳಿಸಿದರು.
ಇನ್ನು 'ಕೋಮುವಾದಿ ನರೇಂದ್ರ ಮೋದಿ ಪ್ರಧಾನಿಯಾಗುವಾಗ ನಾನು ಜೀವಂತ ಇರಲು ಇಷ್ಟ ಪಡುವುದಿಲ್ಲ' ಎಂದಿರುವ ಅನಂತಮೂರ್ತಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಅವರ ವೈಯಕ್ತಿಕ ಹೇಳಿಕೆ, ಆ ಬಗ್ಗೆ ನಾನು ಏನೂ ಹೇಳುವುದಿಲ್ಲ ಎಂದರು.