ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

96 ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್

ಭಾರತ-ಪಾಕಿಸ್ತಾನ ಗಡಿ ಭಾಗದಲ್ಲಿರುವ ಸೇನಾ ನೆಲಗಳ ಮೇಲೆ ಹಾಗೂ ಸಾರ್ವಜನಿಕ ಪ್ರದೇಶಗಳ ಮೇಲೆ ಪದೇಪದೆ ...

Vishwanath S
Updated On : 18 Sept 2013, 5:03 am

ಶ್ರೀನಗರ: ಭಾರತ-ಪಾಕಿಸ್ತಾನ ಗಡಿ ಭಾಗದಲ್ಲಿರುವ ಸೇನಾ ನೆಲಗಳ ಮೇಲೆ ಹಾಗೂ ಸಾರ್ವಜನಿಕ ಪ್ರದೇಶಗಳ ಮೇಲೆ ಪದೇಪದೆ ಅಪ್ರಚೋದಿತ ದಾಳಿ ಮಾಡುತ್ತಿರುವ ಪಾಕಿಸ್ತಾನ,  ಈ ವರ್ಷದಲ್ಲಿ ಸುಮಾರು 96 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರ ಎಸ್.ಎನ್ ಆಚಾರ್ಯ ಅವರು ಬುಧವಾರ ತಿಳಿಸಿದ್ದಾರೆ.

ಈ ವರ್ಷ ಪಾಕ್ ಸೈನಿಕರು ಯೋಧರ ಸೇನಾ ನೆಲಗಳ ಮೇಲೆ ಹಾಗೂ ಸಾರ್ವಜನಿಕ ವಸತಿ ಪ್ರದೇಶಗಳ ಮೇಲೆ ಸುಮಾರು 96 ಬಾರಿ ದಾಳಿ ಮಾಡಿದ್ದಾರೆ. ಇದರೊಂದಿಗೆ ಕಳೆದ ಎಂಟು ವರ್ಷಗಳಲ್ಲೇ ಅತಿ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದಿದ್ದಾರೆ. ಅಲ್ಲದೆ ಈ ತಿಂಗಳಲ್ಲೆ ಪಾಕಿಸ್ತಾನ ಸುಮಾರು 18 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಅವರು ತಿಳಿಸಿದರು.

2003ರಲ್ಲಿ ಪಾಕಿಸ್ತಾನ ಸೈನಿಕರು ಹೆಚ್ಚಿನ ಬಾರಿ ಕದನ ವಿರಾಮ ಉಲ್ಲಂಘಿಸಿದ್ದರು. ಅದಾದ ನಂತರ ಈ ವರ್ಷದಲ್ಲೆ ಹೆಚ್ಚಿನ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಆಚಾರ್ಯ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಮತ್ತು ಅಂತರಾಷ್ಟ್ರೀಯ ಗಡಿಭಾಗದ ಪೂಂಚ್ ಸೆಕ್ಟರ್ ಮೇಲೆ ಪಾಕಿಸ್ತಾನ ಸೈನಿಕರು ಹೆಚ್ಚಿನ ದಾಳಿಗಳನ್ನು ನಡೆಸಿದ್ದಾರೆ. ಅಲ್ಲದೆ ಆಗಸ್ಟ್ 6ರಿಂದ ನಿರಂತರವಾಗಿ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಆಚಾರ್ಯ ಹೇಳಿದರು.

ಆಗಸ್ಟ್ ತಿಂಗಳಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕಿಸ್ತಾನಿ ಸೈನಿಕರು ಆರು ಯೋಧರನ್ನು ಕೊಂದು ಹಾಕಿದ್ದರು. ಪದೇಪದೆ ನಡೆದ ದಾಳಿಯಿಂದಾಗಿ ಸುಮಾರು 14 ಮಂದಿ ಗಾಯಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಕಳೆದ ವರ್ಷ ಸುಮಾರು 93 ಭಾರಿ ಪಾಕಿಸ್ತಾನಿ ಸೈನಿಕರು ಕದನ ವಿರಾಮ ಉಲ್ಲಂಘಿಸಿದ್ದರು ಎಂದು ರಕ್ಷಣಾ ಸಚಿವ ಎ.ಕೆ. ಆಂಟನಿ ಅವರು ಲೋಕಸಭೆಯಲ್ಲಿ ಮಾರ್ಚ್ನಲ್ಲಿ ಮಾಹಿತಿ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement