ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮುಂಬೈ ಗ್ಯಾಂಗ್‌ರೇಪ್: ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ

ಆ.22ರಂದು ಮುಂಬೈನ ಹೊರವಲಯದಲ್ಲಿ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ...

Vishwanath S
Updated On : 19 Sept 2013, 4:10 am

ಮುಂಬೈ: ಆ.22ರಂದು ಮುಂಬೈನ ಹೊರವಲಯದಲ್ಲಿ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಅತ್ಯಾಚಾರ ಪ್ರರಕಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಾಪರಾಧಿಯೂ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೊಲೀಸರು, ಬಾಲ ನ್ಯಾಯಮಂಡಳಿ ಹಾಗೂ ಸೆಷನ್ಸ್ ಕೋರ್ಟ್‌ಗೆ ಇಂದು ಆರೋಪಪಟ್ಟಿ ಸಲ್ಲಿಸಿದರು.

ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಅತ್ಯಾಚಾರಕ್ಕೊಳಗಾದ ಯುವತಿಯು ನೀಡಿದ ಹೇಳಿಕೆ ಹಾಗೂ ಪ್ರತ್ಯಕ್ಷ ದರ್ಶಿಗಳು ನೀಡಿರುವ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಲ್ಲದೆ ಘಟನಾ ಸ್ಥಳದಲ್ಲಿ ದೊರಕಿರುವ ಸಾಕ್ಷ್ಯಗಳು, ಆರೋಪಿಗಳ ಡಿಎನ್‌ಎ ವರದಿ, ದೂರವಾಣಿ ಕರೆಗಳ ಮಾಹಿತಿ ಹಾಗೂ ಇನ್ನಿತರ ವಿವರಗಳನ್ನು ನಮೂದಿಸಲಾಗಿದೆ ಎಂದು ಪೊಲೀಸ್ ಅಧಿಕಾಯೊಬ್ಬರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಾಪರಾಧಿ ಹಾಗೂ ಸಲೀಂ ಅನ್ಸಾರಿ, ವಿಜಯ್ ಜಾವದ್, ಮೋದ್ ಕಸೀಂ ಅಲಿಯಾಸ್ ಕಸೀಂ ಬಂಗಾಳಿ, ಸಿರಾಜ್ ರೆಹಮಾನ್ ಖಾನ್ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement