ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹಣದುಬ್ಬರ ನಿಯಂತ್ರಣಕ್ಕಾಗಿ ರೆಪೊ ದರ ಹೆಚ್ಚಿಸಿದ ಆರ್‌ಬಿಐ

ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತನ್ನ ತ್ರೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ್ದು,..

Lingaraj Badiger
Updated On : 20 Sept 2013, 12:30 pm

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತನ್ನ ತ್ರೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ್ದು, ರೆಪೊ ದರವನ್ನು ಶೇ.0.25ರಷ್ಟು ಹೆಚ್ಚಿಸಿದೆ. ಆದರೆ ನಗದು ಮೀಸಲು ಅನುಪಾತ(ಸಿಆರ್‌ಆರ್)ದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ರೆಪೊ ದರವನ್ನು ಶೇ.7.25ರಿಂದ ಶೇ.7.5ಕ್ಕೆ ಏರಿಕೆ ಮಾಡಲಾಗಿದೆ. ರೆಪೊ ದರ ಹೆಚ್ಚಳದಿಂದ ಇಎಂಐ ಮೊತ್ತ ಹೆಚ್ಚಳವಾಗಲಿದ್ದು, ಇನ್ನುಮುಂದೆ ಮನೆ ಮತ್ತು ಕಾರು ಸಾಲ ಮತ್ತಷ್ಚು ದುಬಾರಿಯಾಗಲಿದೆ. ಅಲ್ಲದೆ ಷೇರು ಮಾರುಕಟ್ಟೆಯಲ್ಲಿ ಭಾರಿ ತಲ್ಲಣ ಉಂಟು ಮಾಡಿದ್ದು, ಸೆನ್ಸೆಕ್ಸ್ 500 ಅಂಕಗಳಷ್ಟು ಮತ್ತು ನಿಫ್ಟಿ 160 ಅಂಕಗಳಷ್ಟು ಕುಸಿತ ಕಂಡಿದೆ.

ಇನ್ನು ಈ ಬಗ್ಗೆ ಮುಂಬೈನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರು, ಹಣದುಬ್ಬರ ನಿಯಂತ್ರಣಕ್ಕಾಗಿ ರೆಪೊ ದರವನ್ನು ಹೆಚ್ಚಿಸಲಾಗಿದೆ ಮತ್ತು ರುಪಾಯಿ ಮೌಲ್ಯ ವೃದ್ಧಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement