ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗಲಭೆ ಪ್ರಕರಣ: ರಾಷ್ಟ್ರಪತಿ ಭೇಟಿ ಮಾಡಿದ ಬಿಜೆಪಿ ನಾಯಕರು

Mainashree
Updated On : 22 Sept 2013, 6:27 am

ನವದೆಹಲಿ: ಮುಜಾಫರ್‌ನಗರ ಗಲಭೆ ಪ್ರಕರಣ ಸಂಬಂಧ ಭಾರತೀಯ ಜನತಾ ಪಕ್ಷದ ಮುಖಂಡರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭಾನುವಾರ ಭೇಟಿ ಮಾಡಿದ್ದಾರೆ.

ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉಮಾ ಭಾರತಿ, ಮನೇಕಾ ಗಾಂಧಿ, ವರುಣ್ ಗಾಂಧಿ ಜೊತೆ 40 ಬಿಜೆಪಿ ಶಾಸಕರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ, ಉತ್ತರಪ್ರದೇಶದ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಮುಜಾಫರ್‌ನಗರದ ಗಲಭೆಯಲ್ಲಿ 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಆದರೆ ಗಲಭೆ ತಡುವಲ್ಲಿ ಸಮಾಜವಾದಿ ಪಕ್ಷ ನೇತ್ರತ್ವದ ಉತ್ತರಪ್ರದೇಶದ ಸರ್ಕಾರ ವಿಫಲಾಗಿದೆ. ಇದರಿಂದ 43 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಆದ್ದರಿಂದ ಉತ್ತರ ಪ್ರದೇಶದ ಸರ್ಕಾರ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಿರುದ್ಧ ಕಠಿಮ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕೋಮುಗಲಭೆ ಸಂದರ್ಭದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗದ ಸರ್ಕಾರ ಇದ್ದರು ಒಂದೇ, ಇಲ್ಲದಿದ್ದರು ಒಂದೇ, ಹೀಗಾಗಿ ಸರ್ಕಾರದ ವಿರುದ್ದ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಯುವತಿಯೊಬ್ಬಳನ್ನು ಯುವಕರ ಗುಂಪೊಂದು ರೇಗಿಸಿದ ಪರಿಣಾಮ ಮುಜಾಫರ್‌ನಗರದ ಕಾವಲಿ ಎಂಬಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಗಲಭೆಯಿಂದಾಗಿ ಇಲ್ಲಿಯವರೆಗೆ ಸುಮಾರು 43 ಜನರು ಪ್ರಾಣ ಕಳೆದುಕೊಂಡಿದ್ದು, ಸುಮಾರು 43 ಸಾವಿರ ಮಂದಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement