ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪಾಕಿಸ್ತಾನದಲ್ಲಿರುವ ಚರ್ಚ್ ಮೇಲೆ ಬಾಂಬ್ ದಾಳಿ: 56 ಸಾವು

ಐತಿಹಾಸಿಕ ಕ್ರಿಶ್ಚಿಯನ್ ಚರ್ಚ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, 56ಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಘಟನೆ ಭಾನುವಾರ...

Mainashree
Updated On : 22 Sept 2013, 5:20 am

ಪೇಶಾವಾರ್: ಐತಿಹಾಸಿಕ ಕ್ರಿಶ್ಚಿಯನ್ ಚರ್ಚ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, 56ಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಪಾಕಿಸ್ತಾನದ ಈಶಾನ್ಯ ದಿಕ್ಕಿನಲ್ಲಿರುವ ಐತಿಹಾಸಿಕ ಚರ್ಚ್ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ ಪರಿಣಾಮ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದವರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಿಗ್ಗೆ ಚರ್ಚ್‌ನಲ್ಲಿ ನಡೆದ ಪ್ರಾರ್ಥನೆಯಲ್ಲಿ 600 ಜನರು ಪಾಲ್ಗೊಂಡಿದ್ದರು. ಪ್ರಾರ್ಥನೆ ನಂತರ ಊಟಕ್ಕೆ ತೆರಳಬೇಕಾದರೆ ಎರಡು ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಮಹಿಳೆಯರು, ಮಕ್ಕಳು ಹಾಗೂ ಇಬ್ಬರು ಮುಸ್ಲಿಂ ಪೊಲೀಸರು ಸೇರಿದಂತೆ 56ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement