ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉ.ಪ್ರ ಗಲಭೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ; ಪ್ರಧಾನಿ

ಇತ್ತೀಚಿಗೆ ಕೋಮು ಗಲಭೆಗಳು ಹೆಚ್ಚುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು, ಉತ್ತರ ಪ್ರದೇಶದ ಮುಜಾಫರ್ನಗರದ ಕೋಮು..

Lingaraj Badiger
Updated On : 23 Sept 2013, 12:45 pm

ನವದೆಹಲಿ: ಇತ್ತೀಚಿಗೆ ಕೋಮು ಗಲಭೆಗಳು ಹೆಚ್ಚುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು, ಉತ್ತರ ಪ್ರದೇಶದ ಮುಜಾಫರ್ನಗರದ ಕೋಮು ಗಲಭೆಗೆ ಕಾರಣರಾದವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ.

ಇಂದು ರಾಷ್ಟ್ರೀಯ ಸಮನ್ವಯ ಸಮಿತಿ(ಎನ್ಐಸಿ) ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ವಎಷ್ಟೇ ಪ್ರಭಾವಿಗಳಾಗಿದ್ದರೂ ಕೋಮುಗಲಭೆ ಹರಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ. ಅದು ಯಾವುದೇ ಪಕ್ಷದ ಅಥವಾ ಯಾವುದೇ ಪ್ರಭಾವಿ ವ್ಯಕ್ತಿಗಳು ಕೋಮುಗಲಭೆಯಲ್ಲಿ ಭಾಗಿಯಾಗಿದ್ದು, ಸಾಬೀತಾದರೆ ಅಂತವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದರು.

ಮುಜಾಫರ್ನಗರ ಹಿಂಸಾಚಾರದಿಂದ ಉತ್ತರ ಪ್ರದೇಶದಲ್ಲಿ ಸಾಕಷ್ಟು ಜೀವ ಹಾನಿ ಹಾಗೂ ಆಸ್ತಿ ಹಾನಿ ಆಗಿದೆ. ಕೆಲವು ತಿಂಗಳ ಹಿಂದಷ್ಟೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕೋಮುಗಲಭೆಯಲ್ಲಿ ಏನಾಯ್ತು ಅಂತ ನಾವು ನೋಡಿದ್ದೇವೆ. ಕೋಮು ಗಲಭೆಯಲ್ಲಿ ತಡೆಯಲು ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದರು.

ಇದೇ ವೇಳೆ, ಸಾಮಾಜಿಕ ಜಾಲ ತಾಣಗಳನ್ನು ದುರ್ಬಳಕೆ ಮಾಡಿಕೊಂಡು ಕೋಮು ಗಲಭೆಗೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಪ್ರಧಾನಿ ಕಳವಳ ವ್ಯಕ್ತಪಡಿಸಿದರು.

ಸೆಪ್ಟೆಂಬರ್ 7ರಂದು ಮುಜಾಫರ್ನಗರದಲ್ಲಿ ನಡೆದ ಕೋಮು ಗಲಭೆಗೆ 50 ಮಂದಿ ಬಲಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement