ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ 30 ಸಾವು
ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 7.8ರಷ್ಟು ತೀವ್ರತೆ ದಾಖಲಾಗಿದೆ...
ಕ್ವೆಟಾ: ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 7.8ರಷ್ಟು ತೀವ್ರತೆ ದಾಖಲಾಗಿದೆ. ಪ್ರಬಲ ಭೂಕಂಪಕ್ಕೆ ಪಾಕಿಸ್ತಾನ ತತ್ತರಿಸಿದ್ದು, ಸುಮಾರು 30 ಮಂದಿ ಮೃತರಾಗಿದ್ದಾರೆ.
ಭೂಕಂಪದಿಂದ ಬಲೂಚಿಸ್ಥಾನದ ಅವಾರನ್ ಎಂಬಲ್ಲಿ ಕಟ್ಟಡ ಕುಸಿದ ಪರಿಣಾಮ ಕಟ್ಟಡ ಅವಶೇಷಗಳಡಿಯಿಂದ ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಲ್ಲದೆ ಸಾವಿನ ಸಂಖ್ಯೆ ಹೇರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಅವಾರನ್‌ನಲ್ಲಿ ಎರಡು ಶಾಲಾ ಕಟ್ಟಡಗಳು ಸೇರಿದಂತೆ ಹಲವು ಮನೆಗಳು ನೆಲಸಮವಾಗಿವೆ.
ಭಾರತದಲ್ಲೂ ಭೂಕಂಪನ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 7.8ರಷ್ಟು ತೀವ್ರತೆ ದಾಖಲಾಗಿದೆ.
ದೆಹಲಿ ಸೇರಿದಂತೆ ಉತ್ತರ ಭಾರತದ ನಾನಾ ಕಡೆಗಳಲ್ಲಿ ಕಂಪನದ ಅನುಭವವಾಗಿದೆ. ಭೂಕಂಪನವಾಗುತ್ತಿದ್ದಂತೆ ಸ್ಥಳೀಯರು ಮನೆಗಳಿಂದ ಹೊರಬಂದಿದ್ದಾರೆ. ಭೂಕಂಪನದ ತೀವ್ರತೆ 7.8ರಷ್ಟು ದಾಖಲಾಗಿದ್ದು, ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.