ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಂಸದ-ಶಾಸಕರ ಅನರ್ಹತೆ; ತಿದ್ದುಪಡಿಗೆ ಕೇಂದ್ರ ಅಂಗೀಕಾರ

ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಸಂಸದ, ಶಾಸಕರ ಅನರ್ಹತೆ ಮತ್ತು ಬಂಧಿತ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ...

Vishwanath S
Updated On : 24 Sept 2013, 6:59 am

ನವದೆಹಲಿ: ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಸಂಸದ, ಶಾಸಕರ ಅನರ್ಹತೆ ಮತ್ತು ಬಂಧಿತ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧದ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಮಂಗಳವಾರ ಅಂಗೀಕರಿಸಿದೆ.

ಸಂಸದ, ಶಾಸಕರ ಅನರ್ಹತೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ರಾಜಕೀಯ ಪಕ್ಷಗಳು ಪಕ್ಷಬೇಧ ಮರೆತು ಹೋರಾಡಿದ್ದರು. ಇದರಿಂದಾಗಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿತ್ತು. ಅದರಂತೆ ಇಂದು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಬದಲಿಸುವ ಮಸೂದೆಯನ್ನು ಅಂಗೀಕರಿಸಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಶಿಕ್ಷಿತ ರಾಜಕಾರಣಿಗಳು ಜೈಲಿನಲ್ಲಿದ್ದುಕೊಂಡೆ ಚುನಾವಣೆಗೆ ಸ್ಪರ್ಧಿಸುವ ಅವಕಾಶ ಒದಗಿದೆ.

ಪೊಲೀಸರ ವಶದಲ್ಲಿರುವ ಸಂಸದರು ಹಾಗೂ ಶಾಸಕರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಜುಲೈ 10ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಇದರಿಂದಾಗಿ ವಿಚಾರಣಾಧೀನ ಕೈದಿಗಳು ಜೈಲಿನಲ್ಲೇ ಇದ್ದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಕಡಿವಾಣ ಬಿದ್ದಿತ್ತು.

ಉಚ್ಚ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ ಎಂಬ ನೆಲೆಯಲ್ಲಿ ಶಿಕ್ಷೆಗೆ ಒಳಗಾದ ಶಾಸಕರನ್ನು ಅನರ್ಹಗೊಳಿಸದಂತೆ ಜನತಾ ಪ್ರಾತಿನಿಧ್ಯ ಕಾಯ್ದೆಯಲ್ಲಿ ರಕ್ಷಣೆ ಒದಗಿಸಿದ್ದ ವಿಧಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement