ಕಲ್ಲಿದ್ದಲು ಹಂಚಿಕೆ ಹಗರಣ: 7 ರಾಜ್ಯಗಳಿಗೆ ಸುಪ್ರೀಂ ನೋಟೀಸ್
ನವದೆಹಲಿ: ಕಲ್ಲಿದ್ದಲು ಬ್ಲಾಕ್‌ಗಳ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಏಳು ರಾಜ್ಯಗಳಿಗೆ ನೋಟೀಸ್ ನೀಡಿದೆ.
ಮಧ್ಯಪ್ರದೇಶ, ಆಂಧ್ರಪ್ರದೇಶ, ಜಾರ್ಕಾಂಡ್, ಒಡಿಶಾ, ಮಹಾರಾಷ್ಟ್ರ, ಚತ್ತೀಸ್‌ಗಢ್ ಮತ್ತು ಪಶ್ಚಿಮ ಬಂಗಾಳದ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ನೋಟೀಸ್ ನೀಡಿದೆ.
ಕಲ್ಲಿದ್ದಲು ಬ್ಲಾಕ್‌ಗಳ ಹಂಚಿಕೆಯಲ್ಲಿ ಸರ್ಕಾರದ ಕಂಪನಿಗಳಿಗೂ ಮತ್ತು ಖಾಸಗಿ ವಲಗಳ ನಡುವೆ ನಡೆದಿರುವ ಒಪ್ಪಂದ ಪತ್ರವನ್ನು ನ್ಯಾಯಾಲಯಕ್ಕೆ ಅಕ್ಟೋಬರ್ 29ರೊಳಗಾಗಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚಿಸಿದೆ.
ಕಲ್ಲಿದ್ದಲು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದ ಫೈಲ್‌ಗಳು ಕಾಣೆಯಾಗಿದ್ದು, ಫೈಲ್‌ಗಳಿಗಾಗಿ ಶೋಧ ಕಾರ್ಯ ಆರಂಭವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಹೊಸ ಅಫಿಡವಿಟ್‌ನ್ನು ಸಲ್ಲಿಸಿತ್ತು. ಪ್ರಕರಣದ ಬಗ್ಗೆ ವರದಿಯನ್ನು ತಮ್ಮ ನ್ಯಾಯವಾದಿಗಳೊಂದಿಗೆ ಹಂಚಿಕೊಳ್ಳಲು ಅವಕಾಶ ಕಲ್ಪಿಸಬೇಕೆಂದು ಸಿಬಿಐ ಅಫಿಡವಿಟ್‌ನಲ್ಲಿ ಉಲ್ಲೇಖಿಸಿತ್ತು.