ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪರಿಷತ್ ಸದಸ್ಯತ್ವಕ್ಕೆ ಮುಮ್ತಾಜ್ ಅಲಿಖಾನ್ ರಾಜಿನಾಮೆ

ಮಾಜಿ ಸಚಿವ ಮುಮ್ತಾಜ್ ಅಲಿಖಾನ್ ಅವರು ಗುರುವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

Lingaraj Badiger
Updated On : 26 Sept 2013, 1:37 am

ಬೆಂಗಳೂರು: ಮಾಜಿ ಸಚಿವ ಮುಮ್ತಾಜ್ ಅಲಿಖಾನ್ ಅವರು ಗುರುವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ಅಲಿಖಾನ್ ಅವರು ಇಂದು ಬೆಳಗ್ಗೆ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರನ್ನು ಭೇಟಿ ಮಾಡಿ, ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದು, ರಾಜಿನಾಮೆಯನ್ನು ಸಭಾಪತಿಗಳು ಅಂಗೀಕರಿಸಿದ್ದಾರೆ.

ಬಿಜೆಪಿ ಫೋರ್ಜರಿ ಪ್ರಕರಣದಿಂದ ಬೇಸತ್ತು ತಾವು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಅಲಿಖಾನ್ ತಿಳಿಸಿದ್ದಾರೆ. ಅಲ್ಲದೆ ಇಂದು ಮಧ್ಯಾಹ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಮತ್ತೊರ್ವ ಬಿಜೆಪಿ ನಾಯಕ, ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಭೇಟಿಗಾಗಿ ಕಾಂಗ್ರೆಸ್ ಕಚೇರಿಗೆ ಆಗಮಿಸಿದ್ದರು. ಪರಮೇಶ್ವರ್ಗಾಗಿ ಅವರ ಕಚೇರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕಾದು ಕುಳಿತಿದ್ದರು. ಆದರೆ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ವಾಪಸ್ ಆಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement