ಮುಂಬೈ ಗ್ಯಾಂಗ್‌ರೇಪ್: ಓರ್ವ ಆರೋಪಿ ಜೈಲಿನಿಂದ ಪರಾರಿ
ಪತ್ರಿಕಾ ಛಾಯಾಗ್ರಾಹಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಲ್ಲಿ ಓರ್ವ ಆರೋಪಿ ..
ಮುಂಬೈ: ಪತ್ರಿಕಾ ಛಾಯಾಗ್ರಾಹಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಲ್ಲಿ ಓರ್ವ ಆರೋಪಿ ಗುರುವಾರ ಜೈಲಿನಿಂದ ಪರಾರಿಯಾಗಿದ್ದಾನೆ.
ಆರೋಪಿ ಸಿರಾಜ್ ಉರ್ ರೆಹಮಾನ್ ಇಂದು ಬೆಳಗ್ಗೆ ಥಾಣೆ ಜೈಲಿನಿಂದ ಪರಾರಿಯಾಗಿದ್ದಾನೆ ಎಂದು ಜೈಲು ಅಧಿಕಾರಿಗಳು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.
ಕಳೆದ ವಾರವಷ್ಟೇ, ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಶಂಕಿತ ಉಗ್ರ ಅಫ್ಜಲ್ ಉಸ್ಮಾನಿ ಕೋರ್ಟ್ ಆವರಣದಿಂದಲೇ ತಪ್ಪಿಸಿಕೊಂಡಿದ್ದ. ಇದೀಗ ಅಂತಹದ್ದೇ ಮತ್ತೊಂದು ಪರಾರಿ ಪ್ರಕರಣ ನಡೆದಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಆಗಸ್ಟ್ 22ರಂದು ಮುಂಬೈನ ಶಕ್ತಿ ಮಿಲ್ಸ್ ಕಾಂಪೌಂಡ್‌ನಲ್ಲಿ 22 ವರ್ಷದ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕಳೆದ ಗುರುವಾರ ಐವರು ಆರೋಪಿಗಳ ವಿರುದ್ಧ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.