ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪಾಕ್‌ನಲ್ಲಿ ಬಾಂಬ್ ಸ್ಫೋಟ: 17 ಸಾವು

Mainashree
Updated On : 27 Sept 2013, 4:11 am

ಪೇಶವಾರ್: ಚಲಿಸುತ್ತಿದ್ದ ಬಸ್‌ನಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ 17 ಜನರು ಮೃತಪಟ್ಟಿರುವ ಘಟನೆ ಶುಕ್ರವಾರ ಪಾಕಿಸ್ತಾನದ ಪೇಶವಾರ್‌ನಲ್ಲಿ ನಡೆದಿದೆ.

ಪಾಕಿಸ್ತಾನದ ಈಶಾನ್ಯ ದಿಕ್ಕಿನಲ್ಲಿರುವ ಪೇಶವಾರ್‌ನಿಂದ 15 ಕಿ.ಮೀ ದೂರದಲ್ಲಿರುವ ಗುಲ್‌ಬೆಲಾ ಪ್ರದೇಶದಲ್ಲಿ ಸರ್ಕಾರಿ ನೌಕರರು ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಬಾಂಬ್ ಸ್ಫೋಟಗೊಂಡು 17 ಜನರು ಸಾವನ್ನಪ್ಪಿದ್ದಾರೆ.

ಸುಮಾರು 70ಕ್ಕೂ ಹೆಚ್ಚು ಸರ್ಕಾರಿ ನೌಕರರು ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡಿದೆ.

ಬಸ್‌ನ ಹಿಂದೆ ಬಾಂಬ್ ಇರಿಸಲಾಗಿತ್ತು ಎಂದು ಹೇಳಿರುವ ಅಧಿಕಾರಿಗಳು 34ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರಿ ನೌಕರರನ್ನು ಹತ್ಯೆಗೈಯ್ಯಲೆಂದೆ ಬಸ್‌ನಲ್ಲಿ ಬಾಂಬ್ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಪೇಶವಾರ ಬಳಿ ಕಳೆದ ಒಂದು ವಾರದಿಂದ ಅನೇಕ ಬಾಂಬ್ ದಾಳಿ ನಡೆಯುತ್ತಿದ್ದು, ಜನರು ಭಯದ ನೆರಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ಭಾನುವಾರ ಪೇಶವಾರದಲ್ಲಿರುವ ಐತಿಹಾಸಿಕ ಚರ್ಚ್ ಮೇಲೆ ಅವಳಿ ಬಾಂಬ್ ಸ್ಫೋಟಿಸಲಾಗಿತ್ತು. ಇದರ ಬೆನ್ನಲ್ಲೆ ಸರ್ಕಾರಿ ನೌಕರರನ್ನು ಗುರಿಯಾಗಿಸಿಟ್ಟುಕೊಂಡ ಉಗ್ರರು ಬಸ್ ಹಿಂದೆ ಬಾಂಬ್ ಇರಿಸಿ ಸ್ಫೋಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement