ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪೊಲೀಸ್ ವರ್ಗಾವಣೆ ಪರ್ವಕ್ಕೆ ಬ್ರೇಕ್

ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಡಿವೈಎಸ್‌ಪಿ ವರ್ಗಾವಣೆ ಪರ್ವಕ್ಕೆ ಸದ್ಯ ಬ್ರೇಕ್ ಬಿದ್ದಿದ್ದು,

Lingaraj Badiger
Updated On : 27 Sept 2013, 12:29 pm

ಬೆಂಗಳೂರು: ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಡಿವೈಎಸ್‌ಪಿ ವರ್ಗಾವಣೆ ಪರ್ವಕ್ಕೆ ಸದ್ಯ ಬ್ರೇಕ್ ಬಿದ್ದಿದ್ದು, ವರ್ಗಾವಣೆ ಆದೇಶಕ್ಕೆ ಪೊಲೀಸ್ ಮಾಹಾ ನಿರ್ದೇಶಕರು ಶುಕ್ರವಾರ ತಡೆ ನೀಡಿದ್ದಾರೆ.

ನಿನ್ನೆ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಹೊರಬೀಳುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಗೃಹ ಸಚಿವ ಕೆ.ಜೆ.ಜಾರ್ಜ್ ಸಹ ಭಾಗಿಯಾಗಿದ್ದರು.

ಸಭೆಯ ಬಳಿಕ ಮಾತನಾಡಿದ ಸಿಎಂ, ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲ. ಡಿಜಿಪಿ ಅಧ್ಯಕ್ಷತೆಯ ಪೊಲೀಸ್ ಸಂಸ್ಥಾಪನ ಮಂಡಳಿಯಿಂದಲೇ ವರ್ಗಾವಣೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಗೃಹ ಸಚಿವ ಜಾರ್ಜ್ ಅವರು ಸಹ ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವರ್ಗಾವಣೆಗೆ ಬ್ರೇಕ್ ಬೀಳುತ್ತಿದ್ದಂತೆಯೇ, ಈಗಾಗಲೇ ವರ್ಗವಾಗಿ ಹೋಗಿದ್ದವರು ಕೂಡಲ್ ವಾಪಸ್ ಬರುವಂತೆ ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು ವೈರ್‌ಲೆಸ್ ಮೂಲಕ ಸಂದೇಶ ರವಾನಿಸಿದ್ದಾರೆ.

ಕೆಲವು ಕಾಂಗ್ರೆಸ್ ಶಾಸಕರು ತಮ್ಮ ಶಿಫಾರಸುಗಳಿಗೆ ಕಿಮ್ಮತ್ತು ನೀಡುತ್ತಿಲ್ಲ. ತಮ್ಮ ಕ್ಷೇತ್ರಗಳಿಗೆ ತಾವು ಕೇಳಿದ ಅಧಿಕಾರಿಗಳನ್ನು ನಿಯೋಜಿಸಿಲ್ಲ. ಬಹುತೇಕ ವರ್ಗಾವಣೆ ಪಟ್ಟಿಯ ಸೂತ್ರಧಾರಿಗಳಾದ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರ ಮೂಗಿನ ನೇರಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ದೂರಿದ್ದರು.

500ಕ್ಕೂ ಅಧಿಕ ಇನ್ಸ್‌ಪೆಕ್ಟರ್‌ಗಳನ್ನು ಹಾಗೂ 55ಕ್ಕು ಹೆಚ್ಚು ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ನಿನ್ನೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement