ಹಿಮಾಚಲ: ಪ್ರಪಾತಕ್ಕೆ ಉರುಳಿದ ಬಸ್, 15 ಸಾವು
ಶಿಮ್ಲಾ: ಹಿಮಾಚಲ ಪ್ರದೇಶದ ಸಿರ್ಮೊರ್ ಜಿಲ್ಲೆಯಲ್ಲಿ ಖಾಸಗಿ ಮಿನಿ-ಬಸ್ವೊಂದು 500 ಅಡಿ ಆಳದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 15 ಮಂದಿ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಈ ಮಿನಿ ಬಸ್ ಉಚ್ಚ ತಿಕ್ಕಾರ್ನಿಂದ ರೇಣುಕಾ ಜಿ ನಗರಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ ಎಂದು ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಖಜನ್ ರಾಮ್ ಅವರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮಿ.ದೂರದಲ್ಲಿರುವ ಜಬ್ರೊಗ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.