ಕೊಪ್ಪಳ: ಸಿಲಿಂಡರ್ ಸ್ಫೋಟಕ್ಕೆ ಮೂವರು ಬಲಿ
ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ..
ಕೊಪ್ಪಳ: ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಶನಿವಾರ ಸಂಭವಿಸಿದೆ.
ಮನೆಯಲ್ಲಿದ್ದ ಅಡಿಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲೇ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೃತರನ್ನು ವರಲಕ್ಷ್ಮಿ(28), ದಿಲೀಪ್(4) ಹಾಗೂ ನಾಗೇಂದ್ರ(2) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.