ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪ್ರಧಾನಿಗೆ ಆತ್ಮಗೌರವ ಇದ್ದರೆ ರಾಜಿನಾಮೆ ನೀಡಲಿ: ಪ್ರಸಾದ್

ಕಳಂಕಿತ ಜನಪ್ರತಿನಿಧಿಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ಸಂಪೂರ್ಣ 'ಮೂರ್ಖತನದ್ದು'..

Lingaraj Badiger
Updated On : 28 Sept 2013, 4:10 am

ನವದೆಹಲಿ: ಕಳಂಕಿತ ಜನಪ್ರತಿನಿಧಿಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ಸಂಪೂರ್ಣ 'ಮೂರ್ಖತನದ್ದು' ಎಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಶನಿವಾರ ಬಿಜೆಪಿ ತೀವ್ರವಾಗಿ ಖಂಡಿಸಿದೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್, ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ನಾನ್‌ಸೆನ್ಸ್ ಎಂದು ಕರೆಯುವ ಮೂಲಕ, ಪ್ರಧಾನಮಂತ್ರಿಗಳ ಸ್ಥಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧವೂ ವಾಗ್ದಾಳಿ ನಡೆಸಿದ ಪ್ರಸಾದ್, ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಪ್ರಧಾನಿಯ ನಿಲುವು ಏನು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಡಾ.ಸಿಂಗ್‌ಗೆ ಆತ್ಮಗೌರವ ಇದ್ದರೆ ತಕ್ಷಣವೇ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಲಾಲು ಉಳಿಸಿಲು ಸುಗ್ರೀವಾಜ್ಞೆ: ವೆಂಕಯ್ಯ ನಾಯ್ಡು
ಯುಪಿಎ ಅಂಗ ಪಕ್ಷ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಸದಸ್ಯತ್ವವನ್ನು ಉಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜನಪ್ರತಿನಿಧಿ ಕಾಯ್ದೆಗೆ ತರಾತುರಿಯಲ್ಲಿ ತಿದ್ದುಪಡಿ ತರಲು ಸುಗ್ರೀವಾಜ್ಞೆ ಹೊರಡಿಸಿದೆ ಎಂದು ಬಿಜೆಪಿ ನಾಯಕ ವೆಂಕಯ್ಯ ನಾಯ್ಡು ದೂರಿದ್ದಾರೆ.

ಕಳಂಕಿತ ಜನಪ್ರತಿನಿಧಿಗಳ ರಕ್ಷಿಸುವ ಸಲುವಾಗಿ ಜಾರಿ ಮಾಡಲು ಹೊರಟಿರುವ ಸುಗ್ರೀವಾಜ್ಞೆ ಸಂಪೂರ್ಣ ಮೂರ್ಖತನದ್ದು, ಇದನ್ನು ಹರಿದು ಕಸದಬುಟ್ಟಿಗೆ ಬಿಸಾಕಬೇಕು ಎಂದು ನಿನ್ನೆ ರಾಹುಲ್ ಗಾಂಧಿ ತಮ್ಮದೇ ಪಕ್ಷದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement