ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಭಯೋತ್ಪಾದನ ದಾಳಿ: ಪಾಕ್ ಜೊತೆ ಮಾತುಕತೆಯ ಭರವಸೆ-ಒಬಮಾ

Mainashree
Updated On : 28 Sept 2013, 5:03 am

ವಾಷಿಂಗ್ಟನ್: ಭಯೋತ್ಪಾದನೆ ನಿಗ್ರಹ ಸಂಬಂಧ ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್ ಅವರೊಂದಿಗೆ ಮಾತಕತೆ ನಡೆಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಮಾ ಶನಿವಾರ ಹೇಳಿದ್ದಾರೆ.

ಭಾರತದ ವಿರುದ್ಧ ಪಾಕಿಸ್ತಾನದ ಮೂಲದ ಭಯೋತ್ಪಾದನೆ ದಾಳಿ ನಡೆಯುತ್ತಿರುವುದರ ಬಗ್ಗೆ ಹಾಗೂ ಭಯೋತ್ಪಾದನೆ ನಿಗ್ರಹದ ಬಗ್ಗೆ ನವಾಜ್ ಶರೀಫ್ ಅವರೊಂದಿಗೆ ಮಾತಕತೆ ನಡೆಸಲಾಗುವುದು ಎಂದು ಒಬಮಾ ಶನಿವಾರ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಭರವಸೆ ನೀಡಿದ್ದಾರೆ.

ಭಯೋತ್ಪಾದನೆಯ ಕೇಂದ್ರ ಬಿಂದು ಪಾಕಿಸ್ತಾನ ಎಂದು ಪ್ರಧಾನಿ ಮನಮೋಹನ್ ಸಿಂಗ್ ಒಬಾಮ ಅವರಿಗೆ ತಿಳಿಸಿದ್ದಾರೆ. ನಿನ್ನೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡ ಅವರು ಎರಡು ದಿನಗಳಿಂದ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ದಾಳಿ ಕುರಿತು ಸಿಂಗ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಭಾರತದ ಮೇಲೆ ನಡೆಯುತ್ತಿರುವ ಭಯೋತ್ಪಾದನೆ ದಾಳಿ ಕುರಿತು ನವಾಜ್ ಶರೀಫ್ ಅವರೊಂದಿಗೆ ನೇರವಾಗಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಒಬಮಾ ಹೇಳಿದ್ದಾರೆ.

ನಿನ್ನೆಯಷ್ಟೇ ಮನಮೋಹನ್ ಸಿಂಗ್ ಅವರು ನವಾಜ್ ಶರೀಫ್ ಜತೆಗೆ ನಡೆಯುವ ಮಾತಕತೆ ಕುರಿತು ಉತ್ಸುಕನಾಗಿದ್ದೇನೆ. ಆದರೆ, ಭಯೋತ್ಪಾದನೆಗೆ ಹಾಲೆರೆಯುತ್ತಿರುವವರ ಜತೆ ಹೆಚ್ಚಿನದ್ದೇನನ್ನೂ ನಿರೀಕ್ಷಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಇದರ ಬೆನ್ನಲ್ಲೇ ಇಂದು ಒಬಮಾ ಮಾತಕತೆ ನಡೆಸುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement