ಮತ್ತೆ ಪಾಕ್‌ನಲ್ಲಿ ಭೂಕಂಪ
ಇಸ್ಲಾಮಾಬಾದ್: ಪಾಕಿಸ್ತಾನದ ನೈರುತ್ಯ ದಿಕ್ಕಿನಲ್ಲಿ ಶನಿವಾರ ಪ್ರಬಲ ಭೂಕಂಪ ಸಂಭವಿಸಿದೆ.
ಎರಡು ದಿನಗಳ ಹಿಂದೆಯಷ್ಟೇ ಪಾಕ್‌ನಲ್ಲಿ ಪ್ರಭಲ ಭೂಕಂಪ ಸಂಭವಿಸಿ, 359ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಶನಿವಾರ ಮತ್ತೆ ಅದೇ ಸ್ಥಳದಲ್ಲಿ ಭೂಕಂಪ ಸಂಭವಿಸಿದೆ. ಭೂಮಿ ಕಂಪಿಸುತ್ತಿದ್ದಂತೆಯೇ ಹೊರಗೆ ಓಡಿ ಬಂದ ಜನರು ಭಯಭೀತರಾಗಿದ್ದಾರೆ.
ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.8ರಷ್ಟು ದಾಖಲಾಗಿದೆ. ಪಾಕಿಸ್ತಾನದ ಬಲುಚಿಸ್ತಾನದಲ್ಲಿ ಭೂಕಂಪ ಸಂಭವಿಸಿದ್ದು, ಯಾವುದೇ ಹಾನಿ ಬಗ್ಗೆ ಈವರೆಗೂ ವರದಿಯಾಗಿಲ್ಲ ಎಂದು ಪಾಕಿಸ್ತಾನದ ಮೂಲಗಳು ತಿಳಿಸಿತವೆ.
ಭಾರತದ ರಾಜಧಾನಿಯಾದ ದೆಹಲಿಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಮೂಲಗಳು ತಿಳಿಸಿವೆ.