ಮುಂಬೈ ಕಟ್ಟಡ ಕುಸಿತ: ಸಾವಿನ ಸಂಖ್ಯೆ 31ಕ್ಕೆ ಏರಿಕೆ
ನಿನ್ನೆ ಸಂಭವಿಸಿದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ)ನ ಐದು ಮಹಡಿಗಳ..
ಮುಂಬೈ: ನಿನ್ನೆ ಸಂಭವಿಸಿದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ)ನ ಐದು ಮಹಡಿಗಳ ವಸತಿ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, 32ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಒಂದು ಡಜನ್ಗೂ ಹೆಚ್ಚು ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಈವರೆಗೆ ಒಟ್ಟು 20 ಮಂದಿಯನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಬಿಎಂಸಿ ಅಧಿಕಾರಿಗಳು ಹೇಳಿದ್ದಾರೆ.
ಮುಂಬೈನ ಮಜಗಾಂವ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 30 ವರ್ಷಗಳಷ್ಚು ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 21 ಕುಟುಂಬಗಳು ವಾಸಿಸುತ್ತಿದ್ದವು ಎನ್ನಲಾಗಿದೆ.