ಶ್ರೀನಗರ: ಸೇನಾಪಡೆಗಳ ಮೇಲೆ ಮತ್ತೆ ಉಗ್ರರ ದಾಳಿ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಶನಿವಾರ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಬೈಕಿನಲ್ಲಿ ಬಂದ ಉಗ್ರರು..
ಶ್ರೀಗನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಶನಿವಾರ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಬೈಕಿನಲ್ಲಿ ಬಂದ ಉಗ್ರರು ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇಂದು ಮಧ್ಯಾಹ್ನ ಶ್ರೀನಗರದ ಸನತ್ ನಗರದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ನಾಗರಿಕ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಇನ್ನು ಉಗ್ರ ಶೋಹದ ಬ್ರಿಗೇಡ್ ಈ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸನತ್ ನಗರ - ಹೈದರ್ಪೊರ್ ಬೈಪಾಸ್ ಬಳಿ ಉಗ್ರರು ಸೇನಾ ವಾಹನಗಳ ಮೇಲೆ ಗುಂಡು ಹಾರಿಸಿದ್ದಾರೆ. ಪೊಲೀಸರು ಹಾಗೂ ಸೈನಿಕರು ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಕಳೆದ ಗುರವಾರಷ್ಟೇ ಪಾಕ್ ಉಗ್ರರು ಜಮ್ಮುವಿನಲ್ಲಿ ಅವಳಿ ಆತ್ಮಹತ್ಯಾ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಸೇನಾ ಅಧಿಕಾರಿ ಸೇರಿದಂತೆ 10 ಮಂದಿ ಮೃತಪಟ್ಟಿದ್ದರು. ಸೇನಾ ಸಮವಸ್ತ್ರದಲ್ಲೇ ಪೊಲೀಸ್ ಠಾಣೆ ಹಾಗೂ ಸೇನಾ ನೆಲೆಗಳಿಗೆ ನುಗ್ಗಿದ್ದ ಮೂವರು ಉಗ್ರರು ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದರು.