ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಖಾಸಗಿ ಹೆಲಿಕಾಪ್ಟರ್ ಪತನ: 5 ಸಾವು

ಥಾಣೆ ಹೊರವಲಯದಲ್ಲಿ ಖಾಸಗಿ ಹೆಲಿಕಾಪ್ಟರ್‌ವೊಂದು ವಿದ್ಯುತ್ ತಂತಿಗೆ ಸಿಲುಕಿ ಅಫಘಾತಕ್ಕೀಡಾಗಿದ್ದು, ಕಾಪ್ಟರ್‌ನಲ್ಲಿದ್ದ ಎಲ್ಲ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

Srinivasa Murthy VN
Updated On : 29 Sept 2013, 5:18 am

ಮುಂಬೈ: ಥಾಣೆ ಹೊರವಲಯದಲ್ಲಿ ಖಾಸಗಿ ಹೆಲಿಕಾಪ್ಟರ್‌ವೊಂದು ವಿದ್ಯುತ್ ತಂತಿಗೆ ಸಿಲುಕಿ ಅಫಘಾತಕ್ಕೀಡಾಗಿದ್ದು, ಕಾಪ್ಟರ್‌ನಲ್ಲಿದ್ದ ಎಲ್ಲ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಯುನೈಟೆಡ್ ಹೆಲಿ ಚಾರ್ಟರ್ ಸಂಸ್ಥೆಗೆ ಸೇರಿದ ಖಾಸಗಿ ಹೆಲಿಕಾಪ್ಟರ್ ಇಂದು ಬೆಳಗ್ಗೆ 7.55ರ ಸುಮಾರಿನಲ್ಲಿ ಮುಂಬೈನ ಜುಹು ಏರ್‌ಡ್ರಮ್ ನಿಂದ ಟೇಕ್‌ಆಫ್ ಆಗಿತ್ತು. ನಾಗಪುರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಇಂಧನ ತುಂಬಿಸಿಕೊಳ್ಳಲು ಔರಂಗಾಬಾದ್ ಹೆಲಿಪಾಡ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಕಾಪ್ಟರ್‌ಗೆ ಸ್ಪರ್ಶಿಸಿ ಹೆಲಿಕಾಪ್ಚರ್‌ನಲ್ಲಿದ್ದ ಎಲ್ಲ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಅಫಘಾತದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಿಮಿಸಿದ ಥಾಣೆ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಪಿ ಅನಿಲ್ ಕುಂಭಾರೆ ಅವರು, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ವಿದ್ಯುತ್ ಸ್ಪರ್ಶದಿಂದಾಗಿ ಹೆಲಿಕಾಪ್ಟರ್ ಸಂಪೂರ್ಣ ಭಸ್ಮವಾಗಿದ್ದು, ಪೈಲಟ್ ಸೇರಿದಂತೆ ಕಾಪ್ಟರ್‌ನಲ್ಲಿದ್ದ ಎಲ್ಲ ಐವರು ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ನಾಗರೀಕ ವಿಮಾನಯಾನ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement