ಮೇವು ಹಗರಣ: ನಾಳೆ ಅಂತಿಮ ತೀರ್ಪು?
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಮೇವು ಹಗರಣದ ಅಂತಿಮ ತೀರ್ಪು ಸೋಮವಾರ ಪ್ರಕಟವಾಗುವ ಸಾಧ್ಯತೆ ಇದೆ.
ರಾಂಚಿ: ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಮೇವು ಹಗರಣದ ಅಂತಿಮ ತೀರ್ಪು ಸೋಮವಾರ ಪ್ರಕಟವಾಗುವ ಸಾಧ್ಯತೆ ಇದೆ.
ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೇವು ಹಗರಣದ ವಿಚಾರಣೆ ಪೂರ್ಣಗೊಂಡಿದ್ದು, ನಾಳೆ ಅಂತಿಮ ತೀರ್ಪು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಹಗರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ರೇಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಮತ್ತು ಮತ್ತೋರ್ವ ಬಿಹಾರ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ ಅವರ ರಾಜಕೀಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ.
ರೈತರಿಗೆ ನೀಡಲಾಗುವ ಪಶು ಆಹಾರ ಯೋಜನೆಯಲ್ಲಿ ನಡೆದ ವ್ಯಾಪಕ ಅಕ್ರಮದಿಂದಾಗಿ ಸರ್ಕಾರದ ಬೋಕ್ಕಸಕ್ಕೆ ಸುಮಾರು 37.70 ಕೋಟಿ ರುಪಾಯಿಯಷ್ಟು ನಷ್ಟಉಂಟಾಗಿತ್ತು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದ ಸಿಬಿಐ ವಿಶೇಷ ನ್ಯಾಯಾಧೀಶ ಪಿ.ಕೆ.ಸಿಂಗ್ ಅವರು ನಾಳೆ ಅಂತಿಮ ತೀರ್ಪು ನೀಡುವ ಸಾಧ್ಯತೆ ಇದೆ. ಈ ಹಿಂದೆ ಮೇವು ಹಗರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಲಾಲು ಪ್ರಸಾದ್ ಯಾದವ್ ಪರ ವಕೀಲರು ಸೆಪ್ಟಂಬರ್ 17ರಂದು ತಮ್ಮ ವಾದವನ್ನು ಪೂರ್ಣಗೊಳಿಸಿದ್ದರು.