ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮುಜಾಫರ್‌ನಗರ ಗಲಭೆ: 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

Mainashree
Updated On : 30 Sept 2013, 1:55 am

ಮುಜಾಫರ್‌ನಗರ: ಮುಜಾಫರ್‌ನಗರದಲ್ಲಿ ನಡೆದ ಕೋಮು ಗಲಭೆ ಸಂದರ್ಭದಲ್ಲಿ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಫುಗುನ ಹಳ್ಳಿಯ ಮೂವರು ಮಹಿಳೆಯರು, ಹಿಂಸಾಚಾರದ ವೇಳೆ ತಮ್ಮ ಮನೆಗೆ ನುಗ್ಗಿದ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿ, ಮನೆಗೆ ಬೆಂಕಿ ಇಟ್ಟಿದ್ದಾರೆಂದು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

ಫುಗನ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿಕೊಂಡಿರುವ ಪೊಲೀಸರು 17 ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 7ರಂದು ಮುಜಾಫರ್‌ನಗರದಲ್ಲಿ ನಡೆದ ಕೋಮು ಗಲಭೆಗೆ 62 ಮಂದಿ ಬಲಿಯಾಗಿದ್ದರು. ಸಾವಿರಾರು ಜನರು ಮನೆಮಠ ಕಳೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement