ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸತೀಶ್ ಸೈಲ್‌ಗೆ ಅ,11ರವರೆಗೆ ನ್ಯಾಯಾಂಗ ಬಂಧನ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕಾರವಾರ ಪಕ್ಷೇತರ ಶಾಸಕ ಸತೀಶ್ ಸೈಲ್ ಅವರಿಗೆ..

Lingaraj Badiger
Updated On : 30 Sept 2013, 4:35 am

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕಾರವಾರ ಪಕ್ಷೇತರ ಶಾಸಕ ಸತೀಶ್ ಸೈಲ್ ಅವರಿಗೆ ಅಕ್ಟೋಬರ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ.

ಸಿಬಿಐ ವಶದಲ್ಲಿದ್ದ ಶಾಸಕ ಸತೀಶ್ ಸೈಲ್ ಅವರನ್ನು ಸಿಬಿಐ ಅಧಿಕಾರಿಗಳು ಇಂದು ಸಿಬಿಐ ವಿಶೇಷ ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಅಕ್ಟೋಬರ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಇದೇ ವೇಳೆ ತಮ್ಮ ತಂದೆಯ ಆರೋಗ್ಯ ಸರಿ ಇಲ್ಲದ ಕಾರಣ ತಮಗೆ ಜಾಮೀನು ನೀಡಬೇಕು ಎಂದ ಕೋರಿ ಸತೀಶ್ ಸೈಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಅಕ್ಟೋಬರ್ 5ಕ್ಕೆ ಮುಂದೂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement