ಅಮೆರಿಕ 'ಶಟ್ಡೌನ್': ದೊಡ್ಡಣ್ಣನ ಸರ್ಕಾರಿ ಸೇವೆ ಸ್ಥಗಿತ
17 ವರ್ಷಗಳಲ್ಲಿ ಮೊದಲ ಬಾರಿಗೆ ಅಮೆರಿಕದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಸರ್ಕಾರಿ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ..
ವಾಷಿಂಗ್ಟನ್: 17 ವರ್ಷಗಳಲ್ಲಿ ಮೊದಲ ಬಾರಿಗೆ ಅಮೆರಿಕದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಸರ್ಕಾರಿ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಇದರಿಂದ ವಿಶ್ವದ ದೊಡ್ಡಣ್ಣ, ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಭಾರಿ ಹಿನ್ನೆಡೆಯಾಗಿದೆ.
ವಾರ್ಷಿಕ ಬಜೆಟ್ಗೆ ಸೆನೆಟ್ನಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳಾದ ಪೊಲೀಸ್ ಹಾಗೂ ಭದ್ರತಾ ಸೇವೆ ಹೊರತು ಪಡಿಸಿ ಉಳಿದ ಎಲ್ಲಾ ರೀತಿಯ ಸರ್ಕಾರಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಮೆರಿಕದ 7,83,000 ಸರ್ಕಾರಿ ನೌಕರರಿಗೆ ವೇತನ ರಹಿತ ರಜೆ ನೀಡಲಾಗಿದೆ.
ಸೆಪ್ಟೆಂಬರ್ 30ಕ್ಕೆ ಅಮೆರಿಕ ಬಜೆಟ್ ಅವಧಿ ಅಂತ್ಯಗೊಂಡಿತ್ತು, ಆದರೆ ನೂತನ ಬಜೆಟ್ಗೆ ಅಮೆರಿಕ ಕಾಂಗ್ರೆಸ್ನಲ್ಲಿ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ಸಂಸ್ಥೆಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.