ಅಸಾರಾಂ ಬಾಪು ಜಾಮೀನು ಅರ್ಜಿ ವಜಾ
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಸ್ವಯ ಘೋಷಿತ ದೇವಮಾನವ..
ಜೊಧ್ಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಸ್ವಯ ಘೋಷಿತ ದೇವಮಾನವ ಅಸಾರಾಂ ಬಾಪು ಅವರ ಜಾಮೀನು ಅರ್ಜಿಯನ್ನು ಜೊಧ್ಪುರ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಜಾಮೀನು ಕೋರಿ ಅಸಾರಾಂ ಬಾಪು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಜೊಧ್ಪುರ ಹೈಕೋರ್ಟ್, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
ವಿವಾದಿತ ದೇವಮಾನವ ಅಸಾರಾಂ ಬಾಪು 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆ. 1ರಂದು ಇಂದೊರ್ನಲ್ಲಿ ಪೊಲೀಸರು ಬಂಧಿಸಿದ್ದರು. ಅಸಾರಾಂ ಬಾಪು ವಿರುದ್ಧ ಸೆಕ್ಷನ್ 376, 342, 506 ಮತ್ತು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ನಿಗ್ರಹ ಕಾಯಿದೆ(ಪಿಒಸಿಎಸ್ಒ) ಸೆಕ್ಷನ್ 8ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.