ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ ಬುಖಾರಿ
ನವದೆಹಲಿ: ಮುಂದಿನ ವಾರ ಲೋಕಸಭೆಗೆ ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದು, ಜಾಮಾ ಮಸೀದಿ ಶಾಹಿ ಇಮಾಮ ಮುಖ್ಯಸ್ಥ ಸೈಯದ್ ಅಹಮದ್ ಬುಖಾರಿ ಶುಕ್ರವಾರ ಕಾಂಗ್ರೆಸ್ಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸ್ಲಿಂರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಬೆಂಬಲಿಸಲಾಗುವುದು ಎಂದರು.
ಅಲ್ಲದೆ ಯಾವುದೇ ಕಾರಣಕ್ಕೂ ಉತ್ತರಪ್ರದೇಶದಲ್ಲಿ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳನ್ನು ಬೆಂಬಲಿಸುವುದಿಲ್ಲ ಎಂದ ಅವರು, ಬಿಹಾರದಲ್ಲಿ ಆರ್ಜೆಡಿ ಹಾಗು ಪಶ್ಚಿಮ ಬಂಗಾಳದಲ್ಲಿ ಆಡಳಿಯಾರೂಢ ತೃಣಮೂಲ ಕಾಂಗ್ರೆಸ್ ಅನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಕೆಲ ಕೋಮುವಾದಿಗಳಿಂದ ಮತ ವಿಭಜನೆ ಯತ್ಮ ನಡೆಯುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕು. ಹಾಗೂ ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಬೇಕಿದೆ ಎಂದರು.
ಎರಡು ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಯ್ಯದ್ ಅಹ್ಮದ್ ಬುಖಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.