ಸಿಎಂ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೋಟಿಸ್
ಬೆಂಗಳೂರು: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ 'ನರಹಂತಕ' ಎಂದು ಜರಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಚುನಾವಣಾ ಆಯೋಗ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ಹೆಚ್.ಡಿ. ಕೋಟೆಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಅವರು, ಗುಜರಾತ್ನ ಗೋಧ್ರಾಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮೋದಿ ಅವರನ್ನು ನರಹಂತಕ ಎಂದು ಜರಿದಿದ್ದರು. ಈ ಹೇಳಿಕೆಗೆ ರಾಜಕೀಯ ವಲಯದಲ್ಲಿ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿತ್ತು.
ಚುನಾವಣಾ ಪ್ರಚಾರದ ವೇಳೆ ಯಾರೂ ವೈಯಕ್ತಿಕವಾಗಿ ಟೀಕೆ ಮಾಡುವಂತಿಲ್ಲ ಎಂದು ಹೇಳಿರುವ ಚುನಾವಣಾ ಆಯೋಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದು, ಈ ಹೇಳಿಕೆಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ.