ಸೂರ್ಯನೆಲ್ಲಿ ಪ್ರಕರಣ: ಅಪರಾಧಿ ಧರ್ಮರಾಜನ್ಗೆ ಜೀವಾವಧಿ ಶಿಕ್ಷೆ
ಸೂರ್ಯನೆಲ್ಲಿ ಅತ್ಯಾಚಾರ ಪ್ರಕರಣದ ಅಪರಾಧಿ ಧರ್ಮರಾಜನ್ಗೆ ಕೇರಳ...
ಕೊಚ್ಚಿ: ಸೂರ್ಯನೆಲ್ಲಿ ಅತ್ಯಾಚಾರ ಪ್ರಕರಣದ ಅಪರಾಧಿ ಧರ್ಮರಾಜನ್ಗೆ ಕೇರಳ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
18 ವರ್ಷಗಳ ಹಿಂದಿನ ಸೂರ್ಯನೆಲ್ಲಿ ಅತ್ಯಾಚಾರ ಪ್ರಕರಣದ ಅಪರಾಧಿ ಧರ್ಮರಾಜನ್ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಹೈಕೋರ್ಟ್, ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.
1996ರಲ್ಲಿ ಕೇರಳದ ಇದ್ದುಕ್ಕಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ 20 ಆರೋಪಿಗಳು ಅತ್ಯಾಚಾರವೆಸಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿತ್ತು. ಪ್ರಕರಣ ವಿಚಾರಣೆ ಸಂದರ್ಭದಲ್ಲಿ ಐವರು ಆರೋಪಿಗಳು ಸಾವನ್ನಪ್ಪಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕೆಳ ನ್ಯಾಯಾಲಯ 35 ಮಂದಿಯನ್ನು ಅಪರಾಧಿಗಳೆಂದು ತೀರ್ಪು ನೀಡಿ, ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದಲ್ಲಿ 35 ಮಂದಿಗಳು ಅಪರಾಧಿಗಳಾಗಿದ್ದು, ಧರ್ಮರಾಜನ್ಗೆ ಜೀವಾವಧಿ ಶಿಕ್ಷೆ ಹಾಗೂ ಉಳಿದ 34 ಅಪರಾಧಿಗಳಿಗೆ ಅಪರಾಧದ ಅನುಗಣವಾಗಿ ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಿದೆ.