ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗೀತಾ ಶಿವರಾಜ್‌ಕುಮಾರ್ ಹರಕೆಯ ಕುರಿ: ಕುಮಾರ್ ಬಂಗಾರಪ್ಪ

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ..

Lingaraj Badiger
Updated On : 5 Apr 2014, 3:33 am

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಹಾಗೂ ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಹರಕೆಯ ಕುರಿ ಎಂದು ಅವರ ಸಹೋದರ ಕುಮಾರ್ ಬಂಗಾರಪ್ಪ ಅವರು ಶನಿವಾರ ಆರೋಪಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರ್ ಬಂಗಾರಪ್ಪ, ಮತ್ತೆ ತಮ್ಮ ಸಹೋದರಿ ಗೀತಾ ಶಿವರಾಜ್‌ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಗೀತಾ ಶಿವರಾಜ್‌ಕುಮಾರ್ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹರಕೆಯ ಕುರಿ ಎಂದು ದೂರಿದರು.

ಇದೇ ವೇಳೆ ತಾವು ಕಾಂಗ್ರೆಸ್‌ನಲ್ಲೇ ಇದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಜಿಲ್ಲೆಯಲ್ಲಿ ಪ್ರಚಾರ ಮಾಡುವುದಾಗಿ ತಿಳಿಸಿದರು.

ಇಂದು ಬೆಳಗ್ಗೆಯಷ್ಟೇ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರು, ಕುಮಾರ್ ಬಂಗಾರಪ್ಪ ಅವರ ನಿವಾಸಕ್ಕೆ ತೆರಳಿ, ಪ್ರಚಾರಕ್ಕೆ ಆಗಮಿಸುವಂತೆ ಮನವಿ ಮಾಡಿದ್ದರು. ಇದಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕುಮಾರ್ ಬಂಗಾರಪ್ಪ, ತಾವು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement