ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಗ್ಮಾ, ಹೇಮಮಾಲಿನಿಗೆ ಹೆಚ್ಚುವರಿ ಭದ್ರತೆ

ಲೋಕಸಭಾ ಚುನಾವಣೆ ಪ್ರಚಾರದ ವೇಳೆ ನಟಿಯರಾದ ನಗ್ಮಾ ಹಾಗೂ ಹೇಮಮಾಲಿನಿ ಅವರಿಗೆ ...

Vishwanath S
Updated On : 5 Apr 2014, 3:50 am

ಲಖನೌ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ನಟಿಯರಾದ ನಗ್ಮಾ ಹಾಗೂ ಹೇಮಮಾಲಿನಿ ಅವರಿಗೆ ಹೆಚ್ಚುವರಿ ಪೊಲೀಸ್ ಭದ್ರತೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ತಾರಾ ಮಣಿಗಳು ಚುನಾವಣಾ ಅಖಾಡಕ್ಕೆ ಇಳಿದಿದ್ದು, ಪ್ರಚಾರ ರ್ಯಾಲಿಗಳ ವೇಳೆ ಕೆಲ ಪುಡಾರಿಗಳು ನಟಿಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆಗಳು ವರದಿಯಾಗಿದ್ದು, ಇದರಿಂದ ಎಚ್ಚೆತ್ತಿರುವ ಚುನಾವಣಾ ಆಯೋಗ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಲು ಮುಂದಾಗಿದೆ.

ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ನಗ್ಮಾ ಅವರಿಗೆ ಪ್ರಚಾರ ಸಂದರ್ಭದಲ್ಲಿ ಕೆಲ ಪೂಡಾರಿಗಳು ಅವರ ಜೊತೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನೆಲೆಯಲ್ಲಿ ನಗ್ಮಾ, ಹೇಮಮಾಲಿನಿ ಹಾಗು ಉಮಾಭಾರತಿ ಅವರಿಗೆ ವಿಶೇಷ ಭದ್ರತೆ ಒದಗಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಉಮೇಶ್ ಸಿನ್ಹಾ ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಮಥುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಾಲಿವುಡ್ ನಟಿ ಹೇಮಮಾಲಿನಿಗೂ ಪ್ರಚಾರದ ವೇಳೆ ಅಹಿತಕರ ಘಟನೆಗಳು ನಡೆದಿದ್ದವು. ಪ್ರಚಾರ ಸಂದರ್ಭದಲ್ಲಿ ಬರುವ ಅಪಾರ ಜನಸ್ತೋಮದ ಮಧ್ಯೆ ಕೆಲವರು ತಳ್ಳಿ ನೂಕಿ ನಟಿಯರಿಗೆ ಮುಜುಗರ ಉಂಟು ಮಾಡುತ್ತಿದ್ದ ಘಟನೆಗಳು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮಾಹಿಳಾ ಅಭ್ಯರ್ಥಿಗಳಿಗೆ ಸುರಕ್ಷತೆಯ ದೃಷ್ಠಿಯಿಂದ ಹೆಚ್ಚಿನ ಭದ್ರತೆ ನೀಡಲು ಚುನಾವಣಾ ಆಯೋಗ ತೀರ್ಮಾನಿಸಿದೆ.

ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಭದ್ರತೆ ಒದಗಿಸುವ ಕುರಿತಂತೆ ಈಗಾಗಲೇ ಎಲ್ಲಾ ಚುನಾವಣಾಧಿಕಾರಿಗಳಿಗೂ ಸುತ್ತೋಲೆ ಹೊರಡಿಸಲಾಗಿದ್ದು, ಪ್ರಚಾರ ರ್ಯಾಲಿಗಳ ವೇಳೆ ಪುಂಡಾಟ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement