ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ದೇಶಕ್ಕೆ ಉತ್ತಮ ಪ್ರಧಾನಿಯಾಗಬಲ್ಲ: ಆಡ್ವಾಣಿ

Vishwanath S
Updated On : 5 Apr 2014, 3:33 am

ಗಾಂಧಿನಗರ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ದೇಶಕ್ಕೆ ಉತ್ತಮ ಪ್ರಧಾನಿಯಾಗಬಲ್ಲರು ಎಂದು ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಆಡ್ವಾಣಿ ಅವರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಗುಜರಾತ್‌ನ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಎಲ್.ಕೆ. ಆಡ್ವಾಣಿ ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆ ನರೇಂದ್ರ ಮೋದಿ, ಬಿಜೆಪಿ ನಾಯಕರು ಹಾಗೂ ಸಾವಿರಾರು ಬೆಂಬಲಿಗರು ಅವರಿಗೆ ಸಾಥ್ ನೀಡಿದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಆಡ್ವಾಣಿ, ಗಾಂಧಿನಗರದಿಂದ ಪುನಃ ಸ್ಪರ್ಧಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಈ ಬಾರಿಯ ಸಮೀಕ್ಷೆಗಳ ಪ್ರಕಾರ ಚುನಾವಣೆಯಲ್ಲಿ ಕಾಂಗ್ರೆಸ್ ಮಖಾಡೆ ಮಲಗಲಿದ್ದು, ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮೋದಿ ಅಥವಾ ಇತರೆ ಯಾವ ನಾಯಕರನ್ನು ಹೋಲಿಕೆ ಮಾಡಲು ಇಚ್ಚಿಸಲ್ಲ. ಅವರವರಿಗೆ ಅವರದೆ ಆದ ಚಿಂತನೆಗಳಿವೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಒಬ್ಬ ಉತ್ತಮ ಸಂಘಟಕ, ಅವರು ದೇಶಕ್ಕೆ ಉತ್ತಮ ಪ್ರಧಾನಿಯಾಗಬಲ್ಲರು ಎಂದರು.

ಸತತ ಐದು ಬಾರಿ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರರಾಗಿ ಗೆದ್ದು ಬಂದಿರುವ ಆಡ್ವಾಣಿ ಅವರು ಆರನೇ ಬಾರಿಗೂ ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬೇಸರಗೊಂಡಿದ್ದ ಆಡ್ವಾಣಿ, ಈ ಬಾರಿ ಲೋಕಸಭಾ ಚುನಾವಣೆಗೆ ಮಧ್ಯಪ್ರದೇಶದ ಭೂಪಾಲ್‌ನಿಂದ ಸ್ಪರ್ಧಿಸಲು ನಿರ್ಧರಿಸಿದ್ದರು. ಆದರೆ ಬಿಜೆಪಿ ಹಿರಿಯ ನಾಯಕರ ಮನವೊಲಿಕೆಯಿಂದಾಗಿ ಆಡ್ವಾಣಿ ಪುನಃ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಲು ಸಮ್ಮತಿಸಿದ್ದರು.

ಉಮೇದುವಾರಿಕೆ ಸಲ್ಲಿಸಿದ ರಾಜ್‌ನಾಥ್ ಸಿಂಗ್
ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಲಖನೌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ತಮ್ಮ ಅಪಾರ ಬೆಂಬಲಿಗರೊಂದಿಗೆ ಜಿಲ್ಲಾ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement