ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಮದಾಸ್ ಗೆ ನೈತಿಕತೆ ಇಲ್ಲ: ಸಿಎಂ ಸಿದ್ಧು

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಬಗ್ಗೆ ಮಾತನಾಡಲು ಮಾಜಿ ಸಚಿವ..

Srinivasa Murthy VN
Updated On : 5 Apr 2014, 7:02 am

ಯಾದಗರಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಬಗ್ಗೆ ಮಾತನಾಡಲು ಮಾಜಿ ಸಚಿವ ರಾಮದಾಸ್ ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಮಾತನಾಡಿದ ಸಿದ್ಧರಾಮಯ್ಯ ಅವರು, ಸೋನಿಯಾಗಾಂಧಿ ಕುರಿತ ರಾಮದಾಸ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. 'ರಾಮದಾಸ್ ಅವರಿಗೆ ಸೋನಿಯಾ ಗಾಂಧಿ ಅವರ ಕುರಿತು ಮಾತನಾಡುವ ನೈತಿಕತೆ ಇಲ್ಲ. ಅವರ ವಿರುದ್ಧವಾಗಿಯೇ ಹೆಣ್ಣು ಮಗಳೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ. ಮೊದಲು ಅವರು ಅದನ್ನು ಸರಿಪಡಿಸಿಕೊಳ್ಳಲಿ'.

"ಸೋನಿಯಾ ಗಾಂಧಿ ಅವರು ಅಧಿಕಾರ ತ್ಯಾಗ ಮಾಡಿ ದೇಶಕ್ಕಾಗಿ ದುಡಿಯುತ್ತಿದ್ದಾರೆ. ದೇಶದ ಸೊಸೆಯಾಗಿ, ತಾಯಿಯಾಗಿ ಅವರು ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ. ಅಧಿಕಾರಕ್ಕಾಗಿ ಎಂದೂ ಅವರು ಆಸೆ ಪಟ್ಟವರಲ್ಲ. ಇದನ್ನರಿತು ರಾಮದಾಸ್ ಅವರು ಮಾತನಾಡಬೇಕು" ಎಂದು ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ರಾಮದಾಸ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಓರ್ವ ದೇಶದ್ರೋಹಿ ಮಗಳು ಎಂದು ಆರೋಪಿಸಿದ್ದರು. ಸೋನಿಯಾ ತಂದೆ ಇಟಲಿ ದೇಶದ ಸೈನಿಕನಾಗಿದ್ದು, ಇತರೆ ದೇಶಗಳಿಗೆ ಗೌಪ್ಯ ಮಾಹಿತಿಗಳನ್ನು ಮಾರಾಟ ಮಾಡಿದ್ದರು ಎಂದು ರಾಮದಾಸ್ ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement