ತೀವ್ರ ಅಸಮಾಧಾನ, ಸೋನಿಯಾಗೆ ಷರೀಷ್ ಪತ್ರ
ಕೆಪಿಸಿಸಿಯ ಕಾರ್ಯ ವೈಖರಿಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಸಿ.ಕೆ ಜಾಫರ್ ಷರೀಷ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...
ಬೆಂಗಳೂರು: ಕೆಪಿಸಿಸಿಯ ಕಾರ್ಯ ವೈಖರಿಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಸಿ.ಕೆ ಜಾಫರ್ ಷರೀಷ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪಿಸಿ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಷರೀಷ್, ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಿ.ಎಂ ಇಬ್ರಾಹಿಂಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸೀಗರನ್ನು ಕಡೆಗಣಿಸಲಾಗುತ್ತಿದ್ದು, ಇದು ನಮ್ಮ ಅಸಮಾಧಾನಕ್ಕೆ ಕಾರಣವಾಗಿದೆ. ಪಕ್ಷಕ್ಕಾಗಿ ನಿರಂತರವಾಗಿ ದುಡಿಯುತ್ತಾ ಬಂದಿದ್ದರು ನಮ್ಮನ್ನು ಮೂಲೆಗುಂಪು ಮಾಡಿದ್ದಾರೆ ಇದು ನನ್ನ ಮನಸ್ಸಿಗೆ ನೋವು ತಂದಿದೆ ಎಂದು ಆರೋಪಿಸಿದ್ದಾರೆ.
ಇಬ್ರಾಹಿಂ ಅಲ್ಪಸಂಖ್ಯಾತರ ಸಮುದಾಯದ ನಾಯಕರಲ್ಲ. ಅವರನ್ನು ನಾಯಕರೆಂದು ನಮ್ಮ ಸಮಾಜ ಒಪ್ಪಿಕೊಳ್ಳುವುದಿಲ್ಲ. ಅವರು ನಮ್ಮ ಸಮೂದಾಯದ ಏಳಿಗೆಗಾಗಿ ಏನು ಮಾಡಿಲ್ಲ. ಆದರು ಇಂತವರ ಪರವಾಗಿ ಸಿದ್ದರಾಮಯ್ಯ ನಿಂತಿದ್ದಾರೆ ಎಂದು ಆರೋಪಿಸಿದ್ದಾರೆ.
ಇಬ್ರಾಹಿಂಗಾಗಿ ಸಿದ್ದರಾಮಯ್ಯ ಹಲವು ಕಸರತ್ತುಗಳನ್ನು ಮಾಡುತ್ತಿದ್ದಾರೆ. ಈ ಹಿಂದಿನ ವಿಧಾನ ಪರಿಷತ್ ಚುನಾವಣೆ ಸಮಯದಲ್ಲಿ ಸಿ.ಎಂ ಇಬ್ರಾಹಿಂಗೆ ವಿಧಾನ ಪರಿಷತ್ ಟಿಕೆಟ್ ನೀಡಿಲ್ಲ ಎಂದು ಆರೋಪಿಸಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು ಎಂಬ ಅಂಶಗಳನ್ನು ನಮೂದಿಸಿದ್ದಾರೆ.
ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಅವಕಾಶ ನೀಡುವಂತೆ ಕೆಪಿಸಿಸಿಗೆ ಮನವಿ ಮಾಡಿದ್ದೇ ಆದರೆ ನನಗೆ ಟಿಕೆಟ್ ಸಿಗದಂತೆ ಮಾಡಲಾಗಿದೆ. ಇದು ಅಲ್ಪಸಂಖ್ಯಾತ ಮುಖಂಡರಿಗೆ ತೀವ್ರ ಬೇಸರಕ್ಕೆ ಕಾರಣವಾಗಿದೆ. ಹೀಗಾಗಿ ಸದ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡದೆ ತಟಸ್ಥವಾಗಿ ಉಳಿದ್ದಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.