ಮಾಜಿ ಶಾಸಕ ಶಂಕರಲಿಂಗೇ ಗೌಡ ವಿಧಿವಶ
ಮಾಜಿ ಶಾಸಕ ಶಂಕರಲಿಂಗೇ ಗೌಡ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ...
ಬೆಂಗಳೂರು: ಮಾಜಿ ಶಾಸಕ ಶಂಕರಲಿಂಗೇ ಗೌಡ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
1994ರಲ್ಲಿ ಪ್ರಪ್ರಥಮವಾಗಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು ಮೈಸೂರಿನ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯಿಂದ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1983ರಲ್ಲಿ ಮೈಸೂರು ನಗರಪಾಲಿಕೆ ಕಾರ್ಪರೇಟರ್ ಆಗಿದ್ದ ಇವರು 1988ರಲ್ಲಿ ಮೈಸೂರು ನಗರ ಪಾಲಿಕೆ ಮೇಯರ್ ಆಗಿದ್ದರು.
ಇತ್ತೀಚೆಗೆ ಮಂತ್ರಿ ಪಟ್ಟಕ್ಕಾಗಿ ಬಿಜೆಪಿ ವಿರುದ್ಧ ಸಿಡಿದೆದ್ದ ಇವರು 2013ರಲ್ಲಿ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದರು. ಅನಂತರ ಜೆಡಿಎಸ್‌ನಿಂದ ಸ್ಪರ್ಧೆಗಿಳಿದಿದ್ದ ಇವರು ಪರಾಭವಗೊಂಡಿದ್ದರು.