ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕ್ರಿಕೆಟಿಗ ಯುವಿ ಮನೆ ಮೇಲೆ ಕಲ್ಲೆಸೆತ

ಭಾರತ ಕ್ರಿಕೆಟ್ ತಂಡದ ಆಟಗಾರ ಯುವರಾಜ್ ಸಿಂಗ್ ಅವರ ಮನೆ ಮೇಲೆ ದುಷ್ಕರ್ಮಿಗಳು ಸೋಮವಾರ ಕಲ್ಲು ತೂರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Srinivasa Murthy VN
Updated On : 7 Apr 2014, 2:17 am

ಚಂಡೀಗಡ: ಭಾರತ ಕ್ರಿಕೆಟ್ ತಂಡದ ಆಟಗಾರ ಯುವರಾಜ್ ಸಿಂಗ್ ಅವರ ಮನೆ ಮೇಲೆ ದುಷ್ಕರ್ಮಿಗಳು ಸೋಮವಾರ ಕಲ್ಲು ತೂರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಸೋಲು ಕಂಡ ಹಿನ್ನಲೆಯಲ್ಲಿ ಕ್ರಿಕೆಟ್ 'ಅಂಧಾ'ಭಿಮಾನಿಗಳು ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಚಂಡೀಗಡ ನಿವಾಸದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಘಟನೆಯಲ್ಲಿ ಯುವರಾಜ್ ಸಿಂಗ್ ಅವರ ಕುಟುಂಬಸ್ಥರಿಗೆ ಯಾವುದೇ ಅಪಾಯಗಳಾಗಿಲ್ಲವಾದರೂ, ಮನೆಯ ಕಿಟಕಿ ಗಾಜುಗಳು ಒಡೆದು ಚೂರಾಗಿವೆ. ಈ ಹಿನ್ನಲೆಯಲ್ಲಿ ಚಂಡೀಗಡದ ಮನಿಮಂಜ್ರಾದಲ್ಲಿರುವ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಮನೆಗೆ ನೀಡಲಾಗಿರುವ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಆಸ್ಟ್ರೇಲಿಯಾ ವಿರುದ್ಧದ ಪಂದ್ಯ(60 ರನ್)ವನ್ನು ಹೊರತು ಪಡಿಸಿದರೆ 'ಟಿ20 ವಿಶ್ವಕಪ್ ಸರಣಿಯುದ್ದಕ್ಕೂ ವಿಫಲ ಪ್ರದರ್ಶನ ನೀಡಿದ್ದರು. ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿಯೂ ಯುವಿ ಕಳಪೆ ಆಟ ಮುಂದುವರೆದಿದ್ದು, ಪಂದ್ಯದ ಪ್ರಮುಖ ಘಟ್ಟದಲ್ಲಿ ಯುವಿ 21 ಎಸೆತಗಳಲ್ಲಿ ಕೇವಲ 11 ರನ್ ಗಳಿಸುವ ಮೂಲಕ ಭಾರತ ತಂಡ ಅಲ್ಪ ಮೊತ್ತ ದಾಖಲಿಸಲು ಕಾರಣಕರ್ತರಾಗಿದ್ದರು. ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 130ರನ್‌ಗಳನ್ನಷ್ಟೇ ಗಳಿಸಿತು.

ಈ ಮೊತ್ತವನ್ನು ಬೆನ್ನುಹತ್ತಿದ ಶ್ರೀಲಂಕಾ ತಂಡ 17.5 ಓವರ್‌ಗಳಲ್ಲಿಯೇ ಯಶಸ್ವಿಯಾಗಿ ಗುರಿಮುಟ್ಟಿತು. ಅಲ್ಲದೆ ಸತತ 18 ವರ್ಷಗಳ ನಂತರ ವಿಶ್ವಕಪ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿತು. ಈ ಹಿಂದೆ 1996ರಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್ ಶ್ರೀಲಂಕಾ ತಂಡದ ಪಾಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement