'ಪ್ರತೀಕಾರ'ದ ಹೇಳಿಕೆ: ಶಾಗೆ ನೋಟಿಸ್
'ಪ್ರತೀಕಾರ'ದ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ...
ನವದೆಹಲಿ: 'ಪ್ರತೀಕಾರ'ದ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಶಾ ಅವರಿಗೆ ಕೇಂದ್ರ ಚುನಾವಣಾ ಆಯೋಗ ಸೋಮವಾರ ನೋಟಿಸ್ ಜಾರಿ ಮಾಡಿದೆ.
ಇಂದು ದೆಹಲಿಯಲ್ಲಿ ನಡೆದ ಚುನಾವಣಾ ಆಯೋಗದ ಸಭೆಯಲ್ಲಿ ಅಮಿತ್ ಶಾ ಹೇಳಿಕೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಹೇಳಿಕೆ ಕುರಿತು ಮೂರು ದಿನದೊಳಗೆ ವಿವರಣೆ ನೀಡುವಂತೆ ಆಯೋಗ ನೋಟಿಸ್ ನೀಡಿದೆ.
ಉತ್ತರಪ್ರದೇಶದ ಬಿಜ್ನೊರ್‌ದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಜಾಟ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದ ಅಮಿತ್ ಶಾ, ಮನುಷ್ಯ ಆಹಾರ ಮತ್ತು ನಿದ್ರೆ ಇಲ್ಲದಿದ್ದರೂ ಬದುಕ ಬಲ್ಲ. ಆದರೆ ತನಗಾದ ಅವಮಾನವನ್ನು ಸಹಿಸಿಕೊಂಡು ಆತ ಬದುಕಲಾರ. ಅವಮಾನಕ್ಕೆ ಪ್ರತೀಕಾರ ಪಡೆಯುವ ಕಾಲ ಸನ್ನಿಹಿತವಾಗಿದೆ. ರಾಜ್ಯದ ಜನತೆಗೆ ಮುಲಾಯಂ ಮತ್ತು ಅಖಿಲೇಶ್ ಸರ್ಕಾರದ ವಿರುದ್ಧ ಸೇಡುತೀರಿಸಿಕೊಳ್ಳುವಂತಿದ್ದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಶಾ ಮನವಿ ಮಾಡಿದ್ದರು.