ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವಿಶ್ವವೇ ಬೆರಗಾಗುವಂತೆ ಬೆಂಗಳೂರು ನಿರ್ಮಾಣ: ರಾಹುಲ್ ಗಾಂಧಿ

ತಾಂತ್ರಿಕತೆಯಲ್ಲಿ ಬೆಂಗಳೂರು ಇತರೆ ನಗರಗಳಿಗೆ ಯಾವುದೇ ರೀತಿಯಲ್ಲಿಯೂ ಕಡಿಮೆ ಇಲ್ಲ. ವಿಶ್ವವೇ ಬೆರಗಾಗುವಂತೆ ಬೆಂಗಳೂರು ಕಟ್ಟಲಾಗಿದೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

Srinivasa Murthy VN
Updated On : 7 Apr 2014, 8:09 am

ಬೆಂಗಳೂರು: ತಾಂತ್ರಿಕತೆಯಲ್ಲಿ ಬೆಂಗಳೂರು ಇತರೆ ನಗರಗಳಿಗೆ ಯಾವುದೇ ರೀತಿಯಲ್ಲಿಯೂ ಕಡಿಮೆ ಇಲ್ಲ. ವಿಶ್ವವೇ ಬೆರಗಾಗುವಂತೆ ಬೆಂಗಳೂರು ಕಟ್ಟಲಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷದ ತ್ಯಾಗ ಮತ್ತು ಬಲಿದಾನದ ಕುರಿತು ಬಿಜೆಪಿ ಪಕ್ಷ ವ್ಯಂಗ್ಯವಾಡುತ್ತಿದ್ದು, ತ್ಯಾಗ ಮತ್ತು ಬಲಿದಾನಗಳ ಮೇಲೆ ದೊಡ್ಡ ಕೆಲಸಗಳಾಗುತ್ತವೆ. ದೇಶಕ್ಕಾಗಿ ಬಿಜೆಪಿ ಏನೂ ತ್ಯಾಗ ಮಾಡಿಲ್ಲ. ಕೇವಲ ಅಧಿಕಾರದ ದಾಹ ಮತ್ತು ಭ್ರಷ್ಟಾಚಾರದಲ್ಲಿ ಬಿಜೆಪಿ ಮುಳುಗಿದ್ದು, ಜನರ ನೆಮ್ಮದಿ ಬಗ್ಗೆ ಅದು ತಲೆ ಕೆಡಿಸಿಕೊಂಡಿಲ್ಲ.

ಈ ಹಿಂದೆ ಕರ್ನಾಟಕದಲ್ಲಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ವಿಶ್ವವೇ ಬೆಂಗಳೂರನ್ನು ಬೆರಗಾಗಿ ನೋಡಿತ್ತು. ತಾಂತ್ರಿಕ ಕ್ಷೇತ್ರದಲ್ಲಿ ಬೆಂಗಳೂರು ಸಾಕಷ್ಟು ಅಭಿವೃದ್ಧಿ ಸಾಧಿಸಿದ್ದು, ಇಡೀ ಜಗತ್ತು ಬೆಂಗಳೂರಿನತ್ತ ತಿರುಗಿ ನೋಡುವಂತೆ ನಗರವನ್ನು ಕಟ್ಟಲಾಗಿದೆ. ಈ ಸಾಧನೆಯ ಹಿಂದೆ ಎಸ್.ಎಂ.ಕೃಷ್ಣ ಅವರ ಶ್ರಮವಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ನನ್ನ ಅವಧಿಯಲ್ಲಿ ಐಟಿ ಕ್ಷೇತ್ರಕ್ಕೆ ಸಾಕಷ್ಟು ಒತ್ತು: ಎಸ್.ಎಂ.ಕೃಷ್ಣ
ಇದೇ ವೇಳೆ ಮಾತನಾಡಿದ ಮಾಜಿ ಕೇಂದ್ರ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಅವರು ತಮ್ಮ ಆಡಳಿತಾವಧಿಯ ಸಾಧನೆಗಳನ್ನು ಮೆಲುಕು ಹಾಕಿದರು. ತಮ್ಮ ಅಧಿಕಾರವಧಿಯಲ್ಲಿ ಬೆಂಗಳೂರಿನ ಐಟಿ ಕ್ಷೇತ್ರಕ್ಕೆ ಬೆಂಬಲ ನೀಡುವ ಮೂಲಕ ಲಕ್ಷಾಂತರ ಉದ್ಯೋಗ ಸೃಷ್ಟಿ ಮಾಡಿದ್ದೆವು. ಆ ಮೂಲಕ ಬೆಂಗಳೂರಿನಲ್ಲಿ ಐಟಿ ಸಂಸ್ಥೆಗಳನ್ನು ಸ್ಥಾಪಿಸಲು ಬೇಕಾದ ವಾತಾವರಣ ಸೃಷ್ಟಿ ಮಾಡಿದೆವು ಎಂದು ಅವರು ಹೇಳಿದರು.

ಬಿಜೆಪಿ ಪ್ರಣಾಳಿಕೆ ಅನುಷ್ಟಾನ ಸಾಧ್ಯವಿಲ್ಲ: ಪರಮೇಶ್ವರ
ಇದಕ್ಕೂ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು, ಬಿಜೆಪಿ ಘೋಷಣೆ ಮಾಡಿರುವ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಅನುಷ್ಟಾನಗೊಳಿಸಲು ಸಾಧ್ಯವೇ ಇಲ್ಲ. ಭ್ರಷ್ಟಾಚಾರ ಕೂಪವಾಗಿರುವ ಬಿಜೆಪಿಯಿಂದ ದೇಶದ ಅಭಿವೃದ್ಧಿ ಅಸಾಧ್ಯವೆಂದು ಹೇಳಿದರು.

ಒಟ್ಟಾರೆ ಇಂದು ಕರ್ನಾಟಕಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಅವರು ಇಂದು ಮಧ್ಯಾಹ್ನ ರಾಯಚೂರಿನಲ್ಲಿ ಮತ್ತು ಸಂಜೆ ಬೆಂಗಳೂರಿನಲ್ಲಿ ಪ್ರಚಾರ ಕೈಗೊಳ್ಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೊಸ ಹುರುಪು ನೀಡಿದರೆ. ಅಂತೆಯೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವುದನ್ನು ಕೂಡ ಮುಂದುವರೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement