ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಶೋಕ್ ಖೇಣಿ ವಿರುದ್ಧ ವಿಚಾರಣೆಗೆ ಹೈಕೋರ್ಟ್ ಅಸ್ತು

ಶಾಸಕ, ನೈಸ್ ಮುಖ್ಯಸ್ಥ ಅಶೋಕ್ ಖೇಣಿ..

Lingaraj Badiger
Updated On : 8 Apr 2014, 4:00 am

ಬೆಂಗಳೂರು: ಕರ್ನಾಟಕ ಮಕ್ಕಳ ಪಕ್ಷದ ಬೀದರ್ ಶಾಸಕ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಅವರ ವಿರುದ್ಧದ ಅರ್ಜಿ ವಿಚಾರಣೆಗೆ ಹೈಕೋರ್ಟ್ ಮಂಗಳವಾರ ಒಪ್ಪಿಗೆ ಸೂಚಿಸಿದೆ.

ಖೇಣಿ ಭಾರತೀಯ ಪೌರತ್ವ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಂ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದ ಖೇಣಿ, ಈ ಅರ್ಜಿ ವಿಚಾರಣೆಗೆ ಅರ್ಹವಲ್ಲ. ಅದನ್ನು ವಜಾಗೊಳಿಸಬೇಕು ಎಂದು ಮನವಿ ಮಾಡಿದ್ದರು. ಆದರೆ ಖೇಣಿಯ ಮನವಿಯನ್ನು ತಿರಸ್ಕರಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠ, ಪೌರತ್ವಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಒದಗಿಸುವಂತೆ ಖೇಣಿಗೆ ಸೂಚಿಸಿದೆ.

ಅಶೋಕ್ ಖೇಣಿ ಅವರು ಭಾರತದ ಪ್ರಜೆಯಲ್ಲ. ಅವರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಜಯ ಗಳಿಸಿದ್ದಾರೆ. ಹೀಗಾಗಿ ಅವರ ಶಾಸಕತ್ವವನ್ನು ರದ್ದುಗೊಳಿಸಿಬೇಕು ಎಂದು ಕೋರಿ ಟಿ.ಜೆ.ಅಬ್ರಹಾಂ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement