ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೋಮು ರಾಜಕೀಯ ಮಾಡುವ ಶಾಗೆ ಜನರ ಬೆಂಬಲ ದುರದೃಷ್ಟ: ಮುಲಾಯಂ

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆಪ್ತ ಅಮಿತ್ ಶಾ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್...

Vishwanath S
Updated On : 8 Apr 2014, 6:23 am

ಲಖನೌ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆಪ್ತ ಅಮಿತ್ ಶಾ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮಂಗಳವಾರ ವಾಗ್ದಾಳಿ ನಡೆಸಿದ್ದು, ಗಲಭೆ ಹೆಸರಲ್ಲಿ  ಅಮಿತ್ ಶಾ ರಾಜಕೀಯ ಮಾಡುತ್ತಿದ್ದರು ಜನರು ಅದನ್ನು ಬೆಂಬಲಿಸುತ್ತಿದ್ದಾರೆಂದು ಇದು ದುರಾದೃಷ್ಟಕರ ಎಂದು ವಿಷಾದಿಸಿದರು.

ಬಿಜೆಪಿ ಪ್ರಚಾರ ರ್ಯಾಲಿ ವೇಳೆ ಉದ್ರೇಕಕಾರಿ ಹೇಳಿಕೆ ನೀಡಿದ್ದ ಅಮಿತ್ ಶಾ ವಿರುದ್ಧ ಮುಲಾಯಂ ಸಿಂಗ್ ಯಾದವ್ ಕಿಡಿಕಾರಿದರು. ಅಲ್ಲದೆ ಉತ್ತರ ಪ್ರದೇಶ ಕೋಮುಗಲಭೆಯನ್ನು ರಾಜಕೀಯಕ್ಕೆ ಬಳಸಿಕೊಂಡು ಅಮಿತ್ ಶಾ ರಾಜಕೀಯ ಮಾಡುತ್ತಿರುವುದು ದುರಾದೃಷ್ಟಕರ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಇಂತಹ ರಾಜಕಾರಣಿಗಳು ಪ್ರಯತ್ನಿಸುತ್ತಿದ್ದರು ಇದಕ್ಕೆ ಜನರು ಬೆಂಬಲ ನೀಡುತ್ತಿರುವುದು ಸರಿಯಲ್ಲ. ಈ ಪ್ರವಿತ್ರ ಭೂಮಿ ರಾಮಾ, ಕೃಷ್ಣ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಭೂಮಿಯಾಗಿದ್ದು, ಏಕತೆಯನ್ನು ಕಾಪಾಡಲು ಅವರೆಲ್ಲ ನಿರಂತರವಾಗಿ ಶ್ರಮಿಸಿದ್ದಾರೆ. ಇದನ್ನು ಬಿಜೆಪಿ ಸಹ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ಬಿಜ್ನೋರ್ ದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್ ಶಾ ಅವರು, ಮನುಷ್ಯ ಆಹಾರ ಮತ್ತು ನಿದ್ರೆ ಇಲ್ಲದಿದ್ದರೂ ಬದುಕ ಬಲ್ಲ. ಆದರೆ ತನಗಾದ ಅವಮಾನವನ್ನು ಸಹಿಸಿಕೊಂಡು ಆತ ಬದುಕಲಾರ. ಅವಮಾನಕ್ಕೆ ಪ್ರತೀಕಾರ ಪಡೆಯುವ ಕಾಲ ಸನ್ನಿಹಿತವಾಗಿದೆ. ರಾಜ್ಯದ ಜನತೆಗೆ ಮುಲಾಯಂ ಮತ್ತು ಅಖಿಲೇಶ್ ಸರ್ಕಾರದ ವಿರುದ್ಧ ಸೇಡುತೀರಿಸಿಕೊಳ್ಳುವಂತಿದ್ದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ ನೀಡುವಂತೆ ಅಮಿತ್ ಶಾ ಮನವಿ ಮಾಡಿದರು.  

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಅಮಿತ್ ಶಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 153(ಎ) ಮತ್ತು 125ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement