ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ವಿರುದ್ಧ ಅಜಯ್ ರಾಯ್ ಸ್ಪರ್ಧೆ ಖಚಿತ

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ...

Vishwanath S
Updated On : 8 Apr 2014, 5:29 am

ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ರಾಯ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ.

ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲಕ್ಕೆ ಸ್ಪಷ್ಟ ಚಿತ್ರಣ ಸಿಕ್ಕಿದ್ದು, ವಾರಣಾಸಿ ವಿಧಾನಸಭಾ ಕ್ಷೇತ್ರದ ಶಾಸಕ ಅಜಯ್ ರಾಯ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. 1996ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಅಜಯ್ ರಾಯ್ ಮೋದಿಗೆ ಪ್ರಬಲ ಸ್ಪರ್ಧೆ ನೀಡಲಿದ್ದಾರಾ ನೋಡಬೇಕಿದೆ.

ಮೋದಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ತೀರ್ಮಾನಿಸಿತ್ತು. ಅದರಂತೆ ಉತ್ತರ ಪ್ರದೇಶದಲ್ಲಿ ಹೆಚ್ಚು ಪ್ರಾಬಲ್ಯ ಹೊಂದಿರುವ ಬುಮಿಹಾರ್ ಸಮುದಾಯಕ್ಕೆ ಸೇರಿದ ಅಜಯ್ ರಾಯ್‌ರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ.

ವಾರಣಾಸಿಯಲ್ಲಿ ಮೋದಿ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಶಾಸಕ ಅಜಯ್ ರಾಯ್ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿದ್ದು, ಚುನಾವಣೆ ಬಳಿಕ ಮತದಾರ ಯಾರ ಕೈಹಿಡಿಯಲಿದ್ದಾನೆ ಎಂಬುದು ತಿಳಿಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement