ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜ್ಯದಲ್ಲಿ 85 ಕ್ರಿಮಿನಲ್ ಹಿನ್ನಲೆಯುಳ್ಳ ಅಭ್ಯರ್ಥಿಗಳು

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ 432 ಅಭ್ಯರ್ಥಿಗಳ ಪೈಕಿ 85 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನಲೆಯುಳ್ಳ..

Lingaraj Badiger
Updated On : 8 Apr 2014, 4:09 am

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ 432 ಅಭ್ಯರ್ಥಿಗಳ ಪೈಕಿ 85 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನಲೆಯುಳ್ಳವರಾಗಿದ್ದಾರೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್(ಎಡಿಆರ್) ಕ್ರಿಮಿನಲ್ ಹಿನ್ನಲೆಯುಳ್ಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕ್ರಿಮಿನಲ್ ಹಿನ್ನಲೆಯುಳ್ಳ 85 ಅಭ್ಯರ್ಥಿಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಪೈಕಿ 30 ಅಭ್ಯರ್ಥಿಗಳ ವಿರುದ್ಧ ಗಂಭೀರ ಕೇಸ್ ದಾಖಲಾಗಿವೆ ಎಂದು ಎಡಿಆರ್ ಸಮನ್ವಯ ಅಧಿಕಾರಿ ಹರೀಶ್ ನರಸಪ್ಪ ಅವರು ಹೇಳಿದ್ದಾರೆ.

ಇಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಹರೀಶ್, ಬಿಜೆಪಿಯಿಂದ 9, ಜೆಡಿಎಸ್‌ನಿಂದ 8, ಕಾಂಗ್ರೆಸ್‌ನಿಂದ 6 ಹಾಗೂ ಬಿಎಸ್‌ಪಿಯಿಂದ ಐವರು ಕ್ರಿಮಿನಲ್ ಹಿನ್ನಲೆಯುಳ್ಳ ಅಭ್ಯರ್ಥಿಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಹುಬ್ಬಳ್ಳಿ ಹಾಗೂ ಬೆಂಗಳೂರು ದಕ್ಷಿಣದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಮೋದ್ ಮುತಾಲಿಕ್ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿವೆ ಎಂದರು.

ಬಿಜೆಪಿ
ಬಿಜೆಪಿಯಲ್ಲಿ ಒಟ್ಟು 9 ಕ್ರಿಮಿನಲ್ ಹಿನ್ನಲೆಯುಳ್ಳ ಅಭ್ಯರ್ಥಿಗಳು ಕಣದಲ್ಲಿದ್ದು, ಆ ಪೈಕಿ ನಾಲ್ವರ ವಿರುದ್ಧ ಗಂಭೀರ ಪ್ರಕರಣಗಳಿವೆ. ಮಾಜಿ ಮುಖ್ಯಮಂತ್ರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ವಿರುದ್ಧ 9 ಹಾಗೂ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿ ಶ್ರೀರಾಮುಲು ವಿರುದ್ಧ 8 ಕೇಸ್ ದಾಖಲಾಗಿವೆ.

ಜೆಡಿಎಸ್
ಜೆಡಿಎಸ್‌ನಲ್ಲಿ ಒಟ್ಟು 8 ಕ್ರಿಮಿನಲ್ ಹಿನ್ನಲೆಯುಳ್ಳ ಅಭ್ಯರ್ಥಿಗಳು ಚುನವಾಣೆಗೆ ಸ್ಪರ್ಧಿಸಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಚಿಕ್ಕಬಳ್ಳಾಪುರ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ 1, ಬೆಳಗಾವಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ವಿರುದ್ಧ 5, ಕೋಲಾರ ಅಭ್ಯರ್ಥಿ ಕೇಶವ್ ವಿರುದ್ಧ 7 ಹಾಗೂ ಬೆಂಗಳೂರು ಕೇಂದ್ರದ ಅಭ್ಯರ್ಥಿ ನಂದಿನಿ ಆಳ್ವ ವಿರುದ್ಧ 3 ಕೇಸ್ ದಾಖಲಾಗಿವೆ.

ಕಾಂಗ್ರೆಸ್
ಕಾಂಗ್ರೆಸ್‌ನಿಂದ 6 ಕ್ರಿಮಿನಲ್ ಹಿನ್ನಲೆಯುಳ್ಳ ಅಭ್ಯರ್ಥಿಗಳು ಕಣದಲ್ಲಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಬೀದರ್ ಅಭ್ಯರ್ಥಿ ಎನ್.ಧರ್ಮಸಿಂಗ್ ವಿರುದ್ಧ 1, ಬಿಜಾಪುರ ಅಭ್ಯರ್ಥಿ ಪ್ರಕಾಶ್ ರಾಥೋಡ್ ವಿರುದ್ಧ 3ಕೇಸ್ ದಾಖಲಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement