ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸೇನೆ-ಉಗ್ರರ ನಡುವೆ ಗುಂಡಿನ ಕಾಳಗ: 6 ಸಾವು

ಕುಪ್ವಾರ: ಭಾರತೀಯ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಭದ್ರತಾಧಿಕಾರಿಗಳು ಸೇರಿದಂತೆ ನಾಲ್ವರು ಮಂಗಳವಾರ ಮೃತಪಟ್ಟಿದ್ದಾರೆ.

Vishwanath S
Updated On : 8 Apr 2014, 6:12 am

ಕುಪ್ವಾರ: ಭಾರತೀಯ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಭದ್ರತಾಧಿಕಾರಿಗಳು ಸೇರಿದಂತೆ ನಾಲ್ವರು ಮಂಗಳವಾರ ಮೃತಪಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಕುಪ್ವಾರದಲ್ಲಿ ಉಗ್ರರ ಆವಳಿ ಹೆಚ್ಚಾಗಿದ್ದು, ಉಗ್ರರ ಸದ್ದಡಗಿಸಲು ಭಾರತೀಯ ಭದ್ರತಾ ಪಡೆಗಳು ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಉಗ್ರರ ಗುಂಡೆಟೀಗೆ ಇಬ್ಬರು ಭದ್ರತಾ ಅಧಿಕಾರಿಗಳು ಹಾಗೂ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ಭಾರತೀಯ ಯೋಧರ ಗುಂಡಿಗೆ ಇಬ್ಬರು ಉಗ್ರರು ಸಹ ಬಲಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕಾಶ್ಮೀರದಲ್ಲಿ ಉಗ್ರರ ಉಪಟಲ ಹೆಚ್ಚಾಗಿರುವುದರಿಂದ ಭದ್ರತಾ ಪಡೆಗಳು ಮತ್ತು ಪೊಲೀಸರು ಕಳೆದ ರಾತ್ರಿಯಿಂದ ಜಂಟಿ ಕಾರ್ಯಾಚರಣೆ ನಡೆಸಿದ್ದು, ಉಗ್ರರ ಹಾಗೂ ಭದ್ರತಾ ಪಡೆಗಳ ನಡುವೆ ನಿರಂತರವಾಗಿ ಗುಂಡಿನ ದಾಳಿ ನಡೆಯುತ್ತಿದ್ದು, ಇಂದು ಮಧ್ಯಾಹ್ನ ಕಾರ್ಯಾಚರಣೆ ಮುಕ್ತಾಯವಾಗಿದೆ. ಸದ್ಯ ಭದ್ರತಾ ಪಡೆಗಳು ಉಗ್ರರಿಗಾಗಿ ಈ ಪ್ರದೇಶದಲ್ಲಿ ಹುಡುಕಾಟ ಪ್ರಾರಂಭಿಸಿದ್ದಾರೆ.

ಈ ಗುಂಡಿನ ಕಾಳಗದಲ್ಲಿ ನಾಲ್ವರು ಭಾರತೀಯ ಅಧಿಕಾರಿಗಳು ಸೇರಿದಂತೆ ಇಬ್ಬರು ಉಗ್ರರು ಮೃತಪಟ್ಟಿದ್ದು, ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement